Monday, August 15, 2022
Home ಸಮಾಚಾರ ರಾಷ್ಟ್ರೀಯ ವಾರ್ತೆ ರಾಹುಲ್ ಸೇರಿದಂತೆ ಕಾಂಗ್ರೆಸಿಗರ ಬಂಧನ

ರಾಹುಲ್ ಸೇರಿದಂತೆ ಕಾಂಗ್ರೆಸಿಗರ ಬಂಧನ

ಸುದ್ದಿಕಿರಣ ವರದಿ
ಮಂಗಳವಾರ, ಜುಲೈ 26

ರಾಹುಲ್ ಸೇರಿದಂತೆ ಕಾಂಗ್ರೆಸಿಗರ ಬಂಧನ
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ದೆಹಲಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈಗಾಗಲೇ ರಾಹುಲ್ ಗಾಂಧಿ ಅವರನ್ನು ಹಲವು ಬಾರಿ ವಿಚಾರಣೆ ನಡೆಸಿರುವ ಇ.ಡಿ., ಎರಡು ದಿನದಿಂದ ಸೋನಿಯಾ ಗಾಂಧಿ ಅವರನ್ನೂ ವಿಚಾರಣೆ ನಡೆಸುತ್ತಿದೆ. ಅದನ್ನು ವಿರೋಧಿಸಿ ಕಾಂಗ್ರೆಸ್ ಸಂಸದರು ಹಾಗೂ ಪ್ರಮುಖ ನಾಯಕರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇ.ಡಿ. ಪ್ರಕರಣದ ಜೊತೆಗೆ ಬೆಲೆ ಏರಿಕೆ ಹಾಗೂ ಜಿಎಸ್.ಟಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಸಂಸತ್ ಆವರಣದಿಂದ ವಿಜಯ್ ಚೌಕ್ ವರೆಗೆ ನಡೆಸುತ್ತಿದ್ದ ಪಾದಯಾತ್ರೆಯನ್ನು ಪೊಲೀಸರು ತಡೆದಿದ್ದಾರೆ.

ಹಾಗಾಗಿ ಪೊಲೀಸರು ಹಾಗೂ ಕಾಂಗ್ರೆಸ್ ನಾಯಕರ ನಡುವೆ ಮಾತಿನ ಚಕಮಕಿ ನಡೆದು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಬಂಧಿತರಲ್ಲಿ ದೀಪೇಂದರ್ ಹೂಡಾ ಮತ್ತು ಮಲ್ಲಿಕಾರ್ಜುನ ಖರ್ಗೆ ಕೂಡಾ ಇದ್ದಾರೆ. ಪೊಲೀಸರ ಅನುಮತಿ ಮೇರೆಗೆ ಪ್ರತಿಭಟನೆ ನಡೆಸುತ್ತಿದ್ದು, ಬಂಧಿಸಿರುವುದು ಕಾನೂನು ಬಾಹಿರ ಎಂದು ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!