Thursday, July 7, 2022
Home ಸಮಾಚಾರ ರಾಷ್ಟ್ರೀಯ ವಾರ್ತೆ ಶೋಭಾ ಕರಂದ್ಲಾಜೆ ಸಹಿತ ನೂತನ ಸಚಿವರ ಪ್ರಮಾಣವಚನ

ಶೋಭಾ ಕರಂದ್ಲಾಜೆ ಸಹಿತ ನೂತನ ಸಚಿವರ ಪ್ರಮಾಣವಚನ

ಆತ್ಮೀಯ ಓದುಗರೇ,
ಕೋವಿಡ್ ಅನ್ ಲಾಕ್ ಹೇಳಿಲ್ಲ; ಹೇಳಿದ್ದು ಸರ್ಕಾರ. ಇನ್ನೂ ಸಂಪೂರ್ಣ ಕೊರೊನಾ ತೊಲಗಿಲ್ಲ. ಹಾಗಾಗಿ ಸ್ವಚ್ಛತೆ ಕಾಪಾಡಿ, ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಪಾಲಿಸಿ. ನೀವು ಸುರಕ್ಷಿತವಿರಿ, ಅನ್ಯರೂ ಸುರಕ್ಷಿತರಾಗಿರಲಿ. ಕೊರೊನಾದಿಂದ ರಕ್ಷಣೆ ನಮ್ಮ ಕೈಯ್ಯಲ್ಲೇ ಇದೆ. ಅಲ್ಲವೇ?
******************************

(ಸುದ್ದಿಕಿರಣ ವರದಿ)

ನವದೆಹಲಿ, ಜು. 7: ಪ್ರಧಾನಿ ನರೇಂದ್ರ ಮೋದಿ ನೂತನ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಪಡೆದಿರುವ ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜ ಸೇರಿದಂತೆ ಕರ್ನಾಟಕದ ನಾಲ್ವರು ಬುಧವಾರ ಪ್ರಮಾಣವಚನ ಸ್ವೀಕರಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಸಮಾರಂಬದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರಮಾಣವಚನ ಬೋಧಿಸಿದರು.

ಮೊದಲಿಗರಾಗಿ ರಾಜೀವ್ ಚಂದ್ರಶೇಖರ್ ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆ ಮೂಲಕ ಅವರು ಮೊದಲ ಬಾರಿಗೆ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದರು.

ಬಳಿಕ ಸಂಸದೆ ಶೋಭಾ ಕರಂದ್ಲಾಜೆ ಕೂಡಾ ರಾಜ್ಯ ಖಾತೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಬಿಜೆಪಿಯ ಹಿರಿಯ ನಾಯಕಿಯಾಗಿರುವ ಅವರು 2014 ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.

ಚಿತ್ರದುರ್ಗ ಕ್ಷೇತ್ರ ಸಂಸದ ಎ. ನಾರಾಯಣಸ್ವಾಮಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸಂಸದರಾಗಿ ಆಯ್ಕೆಯಾದ ಮೊದಲ ಅವಧಿಯಲ್ಲೇ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಪಡೆದ ಹೆಗ್ಗಳಿಕೆಗೆ ನಾರಾಯಣಸ್ವಾಮಿಯವರಿಗೆ ಸಲ್ಲುತ್ತದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೆಕಲ್ ನಿವಾಸಿಯಾದ ಅವರು ಕೃಷಿ, ಉದ್ಯಮದಲ್ಲಿ ತೊಡಗಿಸಿಕೊಂಡಿದ್ದು, 2019ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಬಳಿಕ ಬೀದರ್ ಸಂಸದ ಭಗವಂತ ಖೂಬಾ ಪ್ರಮಾಣ ವಚನ ಸ್ವೀಕರಿಸಿದರು. ಕೃಷಿಕರೂ ಆಗಿರುವ ಖೂಬಾ, ಸಮಾಜಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!