Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಕೊರಗ ವಿದ್ಯಾರ್ಥಿಗಳೊಂದಿಗೆ ಸಂವಾದ

ಕೊರಗ ವಿದ್ಯಾರ್ಥಿಗಳೊಂದಿಗೆ ಸಂವಾದ

ಸುದ್ದಿಕಿರಣ ವರದಿ
ಬುಧವಾರ, ಜೂನ್ 15

ಕೊರಗ ವಿದ್ಯಾರ್ಥಿಗಳೊಂದಿಗೆ ಸಂವಾದ
ಉಡುಪಿ: ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 60ಕ್ಕಿಂತ ಹೆಚ್ಚು ಅಂಕ‌ ಗಳಿಸಿದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊರಗ ಸಮುದಾಯದ ವಿದ್ಯಾರ್ಥಿಗಳನ್ನು ಶಾಸಕ ರಘುಪತಿ ಭಟ್  ಬುಧವಾರ ಸ್ವಗೃಹಕ್ಕೆ  ಕರೆಸಿಕೊಂಡು ಅಭಿನಂದಿಸಿದರು.

ಇದೇ ಸಂದರ್ಭದಲ್ಲಿ ಶಾಸಕ ಭಟ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಬಳಿಕ ಉಪಾಹಾರ ಸೇವಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆಯ ನಾಮ ನಿರ್ದೇಶಿತ ಸದಸ್ಯೆ ಸುಬೇದಾ, ಕೊರಗ ಸಮುದಾಯದ ಮುಖಂಡರಾದ ಬೊಗ್ರ ಕೊರಗ, ಗಣೇಶ್ ಕುಂದಾಪುರ, ಸಂಜೀವ ಮತ್ತು ಗಣೇಶ್ ಬಾರ್ಕೂರು ಹಾಗೂ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಟಿ. ನಾಯ್ಕ್ ಹಾಗೂ ವಿದ್ಯಾರ್ಥಿಗಳ ಪೋಷಕರು ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!