Saturday, July 2, 2022
Home ಸಮಾಚಾರ ಜಿಲ್ಲಾ ಸುದ್ದಿ ಜೂ. 17ರಿಂದ ಹಲಸು, ಜೇನು ಮೇಳ

ಜೂ. 17ರಿಂದ ಹಲಸು, ಜೇನು ಮೇಳ

ಸುದ್ದಿಕಿರಣ ವರದಿ
ಬುಧವಾರ, ಜೂನ್ 15

ಜೂ. 17ರಿಂದ ಹಲಸು, ಜೇನು ಮೇಳ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಲಸು ಹಾಗೂ ಜೇನು ಪ್ರದರ್ಶನ ಮತ್ತು ಮಾರಾಟ ಮೇಳ ಈ ತಿಂಗಳ 17ರಿಂದ 19ರ ವರೆಗೆ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ಪುಷ್ಪ ಹರಾಜು ಕೇಂದ್ರ ಆವರಣದಲ್ಲಿ ನಡೆಯಲಿದೆ.

ಮೇಳದಲ್ಲಿ ಹಲಸಿನ ವಿವಿಧ ತಳಿಗಳು, ಹಲಸಿನ ಆಹಾರ ಉತ್ಪನ್ನಗಳು ಹಾಗೂ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ, ಜಿಲ್ಲೆಯಲ್ಲಿ ಉತ್ಪಾದನೆಯಾಗುವ ಜೇನಿನ ಪ್ರದರ್ಶನ ಹಾಗೂ ಮಾರಾಟ ಇರಲಿದೆ.

ಜಿಲ್ಲೆಯ ವಿವಿಧ ರೈತರು ಬೆಳೆಯುವ ಅಪರೂಪದ ಹಣ್ಣುಗಳು ಹಾಗೂ ಅಣಬೆ ಮಾರಾಟ ಮಾಡಲು ಇಚ್ಛಿಸುವ ರೈತರು, ರೈತ ಸಂಘಗಳು, ರೈತ ಉತ್ಪಾದಕರ ಸಂಸ್ಥೆ ಹಾಗೂ ಸಂಸ್ಕರಣಾ ಘಟಕಗಳ ಮಾಲಕರು ಜೂ. 16ರೊಳಗೆ ತಮ್ಮ ಉತ್ಪನ್ನ ಹಾಗೂ ಲಭ್ಯತೆಯ ವಿವರದೊಂದಿಗೆ ತೋಟಗಾರಿಕೆ ಉಪನಿರ್ದೇಶಕರನ್ನು (0820-2531950) ಸಂಪರ್ಕಿಸಿ ಮೇಳದಲ್ಲಿ ಭಾಗವಹಿಸಬಹುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!