Sunday, July 3, 2022
Home ಸಮಾಚಾರ ಜಿಲ್ಲಾ ಸುದ್ದಿ ಜಲಜೀವನ್ ಮಿಷನ್ ಯಶಸ್ವಿ ಅನುಷ್ಠಾನಕ್ಕೆ ಕರೆ

ಜಲಜೀವನ್ ಮಿಷನ್ ಯಶಸ್ವಿ ಅನುಷ್ಠಾನಕ್ಕೆ ಕರೆ

ಉಡುಪಿ: ಜಲಜೀವನ್ ಮಿಷನ್ ಯೋಜನೆಯನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸುವಂತೆ ಹಾಗೂ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಎಲ್ಲರೂ ಒಟ್ಟಾಗಿ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಸೂಚಿಸಿದರು.

ಜಿಲ್ಲಾ ಪಂಚಾಯತ್ ಉಡುಪಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಉಡುಪಿ ಹಾಗೂ ಪುಣ್ಯಕೋಟಿ ಇಂಟಿಗ್ರೇಟೆಡ್ ರೂರಲ್ ಡೆವಲೆಪ್ ಮೆಂಟ್ ಸೊಸೈಟಿ ತುಮಕೂರು ಸಹಯೋಗದೊಂದಿಗೆ ಜಿಲ್ಲೆಯ ವಿವಿಧ ಇಲಾಖಾಧಿಕಾರಿಗಳು, ಇಂಜಿನಿಯರ್ ಗಳು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ನಡೆದ ಜಲಜೀವನ್ ಮಿಷನ್ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಮಳೆ ನೀರಿನ ಕೊಯ್ಲು ಮಾದರಿ ಅನಾವರಣಗೊಳಿಸಿ, ನೀರು ಅಮೂಲ್ಯವಾದದ್ದು. ಅದನ್ನು ವ್ಯರ್ಥ ಮಾಡದೆ ಮಿತವಾಗಿ ಬಳಸುವ ಕುರಿತು ಗ್ರಾಮೀಣ ಜನರಲ್ಲಿ ಅರಿವು ಮೂಡಿಸಬೇಕು ಎಂದರು.

ಮಳೆ ನೀರಿನ ಕೊಯ್ಲು ಮಾದರಿಯನ್ನು ನೀರು ಸಂರಕ್ಷಣೆ ಪರಿಣಿತ ಜೋಸೆಫ್ ರೆಬೆಲ್ಲೊ ಸಿದ್ದಪಡಿಸಿದ್ದರು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕಿರಣ್ ಫಡ್ನೇಕರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಾರ್ಯಪಾಲಕ ಅಭಿಯಂತರ ಎ. ರಾಜಾ, ಬೆಂಗಳೂರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ರಾಜ್ಯ ಸಮಾಲೋಚಕ ದಿನೇಶ್ ಹಾಗೂ ಪುಣ್ಯಕೋಟಿ ಸಂಸ್ಥೆ ಕಾರ್ಯದರ್ಶಿ ಲಕ್ಷ್ಮೀನರಸಿಂಹಯ್ಯ ಇದ್ದರು.

ಪುಣ್ಯಕೋಟಿ ಸಂಸ್ಥೆ ಪ್ರತಿನಿಧಿ ಗಿರೀಶ್ ಸ್ವಾಗತಿಸಿ, ಸ್ವಚ್ಛ ಭಾರತ್ ಮಿಷನ್ ಸಂಯೋಜಕಿ ಸಹನಾ ಹೆಗ್ಡೆ ನಿರೂಪಿಸಿದರು. ಜಲಜೀವನ್ ಮಿಷನ್ ಜಿಲ್ಲಾ ವ್ಯವಸ್ಥಾಪಕ ಸುಧೀರ್ ವಂದಿಸಿದರು.

ಬಳಿಕ ಸಂಪನ್ಮೂಲವ್ಯಕ್ತಿಗಳಿಂದ ತರಬೇತಿ ನಡೆಯಿತು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!