ಉಡುಪಿ: ಕೋವಿಡ್ ಕಾರಣದಿಂದ ವಿಳಂಬವಾಗಿರುವ ಮಾಸ್ಟರ್ ಪ್ಲಾನ್ ಗೆ ವೇಗ, ಸಾರ್ವಜನಿಕರಿಗೆ ತಮ್ಮ ಅರ್ಜಿ ಸ್ಥಿತಿಗತಿ ಮಾಹಿತಿ ನೀಡುವ ನೂತನ ಸಾಫ್ಟ್ ವೇರ್ ಅಳವಡಿಕೆ, ಪ್ರಾಧಿಕಾರ ವ್ಯಾಪ್ತಿಯಲ್ಲಿ ಅರ್ಜಿಗಳ ತ್ವರಿತ ವಿಲೇವಾರಿ ಮೂಲಕ ಜನಸ್ನೇಹಿ ಆಡಳಿತ ನೀಡಲು ಮಂಗಳವಾರ ನಡೆದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಸಭೆ ನಿರ್ಣಯಿಸಿತು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ ಅಧ್ಯಕ್ಷತೆ ವಹಿಸಿದ್ದರು.
ಶಾಸಕ ಕೆ. ರಘುಪತಿ ಭಟ್ ಸಭೆಯಲ್ಲಿ ಭಾಗವಹಿಸಿದ್ದರು. ಕೆರೆ, ಪಾರ್ಕ್ ಅಭಿವೃದ್ಧಿ ಯೋಜನೆಗಳನ್ನು ಶೀಘ್ರ ರೂಪಿಸುವ ಬಗ್ಗೆ ಚರ್ಚೆ ನಡೆಸಿದರು.
ಪ್ರಾಧಿಕಾರ ಸದಸ್ಯರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ದಿನಕರ ಪೂಜಾರಿ, ಕಿಶೋರ್ ಕುಮಾರ್ ಮತ್ತು ಸುಮಾ ನಾಯ್ಕ್, ಕುಂದಾಪುರದ ಸಹಾಯಕ ಆಯುಕ್ತ ಮತ್ತು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ಕೆ. ರಾಜು, ನಗರಸಭೆ ಪೌರಾಯುಕ್ತ ಡಾ| ಉದಯ ಶೆಟ್ಟಿ, ನಗರ ಯೋಜನಾ ಸದಸ್ಯ ಜಿತೇಶ್, ಸಣ್ಣ ನೀರಾವರಿ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ಮೆಸ್ಕಾಂ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ನಗರಾಭಿವೃದ್ಧಿ ಪ್ರಾಧಿಕಾರ ಸದಸ್ಯರಾಗಿ ಉಡುಪಿ ನಗರಸಭೆಯಿಂದ ನಾಮನಿರ್ದೇಶನಗೊಂಡ ಪ್ರಭಾಕರ ಪೂಜಾರಿ ಅವರನ್ನು ಗೌರವಿಸಲಾಯಿತು