ಸುದ್ದಿಕಿರಣ ವರದಿ
ಮಂಗಳವಾರ, ಮೇ 17
ಜ್ಯೋತಿಷ್ಯ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ
ಉಡುಪಿ: ಇಲ್ಲಿನ ಶ್ರೀಮನ್ಮಧ್ವಸಿದ್ಧಾಂತ ಪ್ರಬೋಧಕ ಸಂಸ್ಕೃತ ಸಂಶೋಧನ ಕೇಂದ್ರ ವತಿಯಿಂದ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ಆರ್ಥಿಕ ಅನುದಾನದಿಂದ ಪೂರ್ಣಗೊಂಡ ಜೌತಿಷ ವಿಶ್ವಕೋಶದ ಮೊಬೈಲ್ ಅಪ್ಲಿಕೇಶನ್ ನ್ನು ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿ, ಶುಭ ಕೋರಿದರು.
ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹಾಗೂ ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು.
ಮುಖ್ಯ ಅತಿಥಿಗಳಾಗಿ ಸಂಸ್ಕೃತ ಪಾಠಶಾಲೆ ಪ್ರಾಂಶುಪಾಲ ಪ್ರೊ. ಕೆ. ಸತ್ಯನಾರಾಯಣ ರಾವ್ ಆಗಮಿಸಿದ್ದರು.
ಕೇಂದ್ರದ ಆಡಳಿತ ಮಂಡಳಿ ಪದಾಧಿಕಾರಿಗಳಾದ ದೇವಾನಂದ ಉಪಾಧ್ಯಾಯ ಮತ್ತು ಚಂದ್ರಶೇಖರ ಆಚಾರ್ಯ ಇದ್ದರು.
ಸಂಶೋಧನ ಕೇಂದ್ರ ನಿರ್ದೇಶಕ ಡಾ| ಕಡಂದಲೆ ಗಣಪತಿ ಭಟ್ ಸ್ವಾಗತಿಸಿ, ನಿರೂಪಿಸಿದರು.
ಈ ಅಪ್ಲಿಕೇಶನ್ ಗೂಗಲ್ ಪ್ಲೇ ಸ್ಟೋರ್ ಮತ್ತು ಆ್ಯಪಲ್ ನ ಆ್ಯಪ್ ಸ್ಟೋರ್ ನಲ್ಲಿ ಲಭ್ಯವಿದೆ