ಸುದ್ದಿಕಿರಣ ವರದಿ
ಗುರುವಾರ, ಮೇ 12
ದ.ಕ. ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷರಾಗಿ ಸುಚರಿತ ಶೆಟ್ಟಿ ಆಯ್ಕೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾಗಿ ಕೆ.ಪಿ. ಸುಚರಿತ ಶೆಟ್ಟಿ ಆಯ್ಕೆಯಾಗಿದ್ದಾರೆ.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ, ಹಾಲು ಉತ್ಪಾದಕರ ಒಕ್ಕೂಟ ಉಪಾಧ್ಯಕ್ಷರಾಗಿ, ಬಿಜೆಪಿ ಮಂಡಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಹಲವಾರು ಸಂಘಸಂಸ್ಥೆಗಳಲ್ಲಿ ಪ್ರಮುಖ ಸ್ಥಾನಗಳನ್ನು ನಿರ್ವಹಿಸಿದ್ದಾರೆ.
ಅಭಿನಂದನೆ
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನೂತನ ಅಧ್ಯಕ್ಷ ಕೆ. ಪಿ. ಸುಚರಿತ ಶೆಟ್ಟಿ ಹಾಗು ಉಪಾಧ್ಯಕ್ಷ ಜಯರಾಮ್ ರೈ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಅಭಿನಂದಿಸಿದರು.
ಪಕ್ಷ ಪ್ರಮುಖರಾದ ರಾಮದಾಸ್ ಬಂಟ್ವಾಳ, ಕಸ್ತೂರಿ ಪಂಜ, ಸುಧೀರ್ ಶೆಟ್ಟಿ, ಗುರುಚರಣ್, ಅಶ್ವಥ್ ಪಣಪಿಲ ಇದ್ದರು