ಉಡುಪಿ: ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಸಮಿತಿ ಮತ್ತು ಜೀರ್ಣೋದ್ಧಾರ ಸಮಿತಿ ಸದಸ್ಯರು ಈಚೆಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ದೇವಸ್ಥಾನದ ಜೀರ್ಣೋದ್ಧಾರ ಪ್ರಕ್ರಿಯೆ ಬಗ್ಗೆ ಮನವಿ ಸಲ್ಲಿಸಲಾಯಿತು.
ಮನವಿಗೆ ಸ್ಪಂದಿಸಿದ ಡಾ| ಹೆಗ್ಗಡೆ, ಕ್ಷೇತ್ರದ ವತಿಯಿಂದ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ. ರವಿರಾಜ ವಿ. ಆಚಾರ್ಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ನಾಗೇಶ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ಕಿಣಿ, ಉಪಾಧ್ಯಕ್ಷರಾದ ಸತೀಶ್ ಕುಲಾಲ್ ಮತ್ತು ವಸಂತ ರಾವ್, ವ್ಯವಸ್ಥಾಪನ ಮಂಡಳಿ ಸದಸ್ಯರಾದ ಮಂಜುನಾಥ ಹೆಬ್ಬಾರ್ ಮತ್ತು ಜಯಂತ ಕುಂದರ್ ಇದ್ದರು.
ಇದೇ ಸಂದರ್ಭದಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥಸ್ವಾಮಿ, ಕುಕ್ಕೆ ಸುಬ್ರಹ್ಮಣ್ಯ ಹಾಗೂ ಸೌತಡ್ಕ ಮಹಾಗಣಪತಿ ಸನ್ನಿಧಾನಗಳಿಗೂ ತೆರಳಿ ದರ್ಶನ ಪಡೆದು ಜೀರ್ಣೋದ್ಧಾರ ಪ್ರಕ್ರಿಯೆ ನಿರ್ವಿಘ್ನವಾಗಿ ನೆರವೇರುವಂತೆ ಪ್ರಾರ್ಥಿಸಲಾಯಿತು.