ಸುದ್ದಿಕಿರಣ ವರದಿ
ಭಾನುವಾರ, ಮೇ 8
ಅರೆಹೊಳೆ ಗಣಪಯ್ಯ ಸ್ಮಾರಕ ಪ್ರಶಸ್ತಿಗೆ ವಿನಾಯಕ ಕಲಗದ್ದೆ ಆಯ್ಕೆ
ಮಂಗಳೂರು: ಅರೆಹೊಳೆ ಪ್ರತಿಷ್ಠಾನ ಅಧ್ಯಕ್ಷ ಅರೆಹೊಳೆ ಸದಾಶಿವ ರಾವ್ ತಂದೆ ಅರೆಹೊಳೆ ಗಣಪಯ್ಯ ಸ್ಮರಣಾರ್ಥ ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದ ಸಾಧಕರಿಗೆ ನೀಡುವ ಅರೆಹೊಳೆ ಗಣಪಯ್ಯ ಸ್ಮಾರಕ ಚೊಚ್ಚಲ ಪ್ರಶಸ್ತಿಗೆ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ಸಮೀಪದ ಕಲಗದ್ದೆ ವಿನಾಯಕ ಹೆಗಡೆ ಆಯ್ಕೆಯಾಗಿದ್ದಾರೆ.
ಯಕ್ಷಗಾನ ಕಲಾವಿದರಾಗಿ, ಕಲಗದ್ದೆಯಲ್ಲಿ ಯಕ್ಷನಾಟ್ಯ ವಿನಾಯಕ ದೇವಸ್ಥಾನ ಸ್ಥಾಪಿಸಿ, ನಿರಂತರ ಕಲಾ ಸೇವೆ ಮಾಡುತ್ತಿರುವ ಅವರು, ಶಂಭು ಶಿಷ್ಯ ಯಕ್ಷಗಾನ ಪ್ರತಿಷ್ಠಾನದ ಮೂಲಕ ಪ್ರದರ್ಶನಗಳನ್ನೂ ನೀಡುತ್ತಿದ್ದಾರೆ.
ಕಲಗದ್ದೆಯನ್ನು ಪ್ರೇಕ್ಷಣೀಯ ಪುಣ್ಯಕ್ಷೇತ್ರವನ್ನಾಗಿ ಏಕವ್ಯಕ್ತಿಯಾಗಿ ರೂಪಿಸಿದ್ದಾರೆ.
ಪ್ರಶಸ್ತಿ ಪ್ರಶಸ್ತಿಪತ್ರ, ಫಲಕ ಹಾಗೂ ಗೌರವಧನವನ್ನೊಳಗೊಂಡಿದ್ದು ಮೇ 15ರಂದು ಅರೆಹೊಳೆಯಲ್ಲಿ ನಡೆಯುವ ಪ್ರಥಮ ವರ್ಷದ ಗಣಪಯ್ಯ ಸಂಸ್ಮರಣೆಯಂದು ಗಣ್ಯರ ಉಪಸ್ಥಿತಿಯಲ್ಲಿ ಪ್ರದಾನ ಮಾಡಲಾಗುವುದು ಎಂದು ಅರೆಹೊಳೆ ಪ್ರತಿಷ್ಠಾನ ಅಧ್ಯಕ್ಷ ಅರೆಹೊಳೆ ಸದಾಶಿವ ರಾವ್ ತಿಳಿಸಿದ್ದಾರೆ