Sunday, July 3, 2022
Home ಸಮಾಚಾರ ಜಿಲ್ಲಾ ಸುದ್ದಿ ಕಾಪು ಹೊಸ ಮಾರಿಗುಡಿ ದೇವಳ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾಗಿ ಗುರ್ಮೆ ಸುರೇಶ ಶೆಟ್ಟಿ ಆಯ್ಕೆ

ಕಾಪು ಹೊಸ ಮಾರಿಗುಡಿ ದೇವಳ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾಗಿ ಗುರ್ಮೆ ಸುರೇಶ ಶೆಟ್ಟಿ ಆಯ್ಕೆ

ಕಾಪು: ಇಲ್ಲಿನ ಹೊಸ ಶ್ರೀ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾಗಿ ಉದ್ಯಮಿ, ಕೊಡುಗೈ ದಾನಿ, ಸಾಹಿತ್ಯ ಪ್ರೇಮಿ, ಸಂಘಟಕ ಸುರೇಶ್ ಪಿ. ಶೆಟ್ಟಿ ಗುರ್ಮ ಅವರನ್ನು ಸವರ್ಾನುಮತದಿಂದ ಆಯ್ಕೆ ಮಾಡಲಾಗಿದೆ.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅಧ್ಯಕ್ಷತೆಯಲ್ಲಿ ನಡೆದ ದೇವಸ್ಥಾನದ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆಸಲಾಯಿತು.
ಅಭಿವೃದ್ಧಿ ಸಮಿತಿಯ ಖಾಯಂ ಆಹ್ವಾನಿತರಾಗಿ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡಲಾಯಿತು. ಜಯ ಸಿ. ಸುವರ್ಣ ನಿಧನದಿಂದ ತೆರವಾಗಿರುವ ಗೌರವಾಧ್ಯಕ್ಷ ಸ್ಥಾನಕ್ಕೆ ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಗೌರವಾಧ್ಯಕ್ಷರಾದ ಮಾಜಿ ಸಚಿವ ವಿನಯಕುಮಾರ್ ಸೊರಕೆ ಮತ್ತು ಮೂಳೂರು ಸುಧಾಕರ ಹೆಗ್ಡೆ ಮುಂಬಯಿ, ಆಡಳಿತಾಧಿಕಾರಿ ರವಿ ಕುಮಾರ್, ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಕೋಶಾಧಿಕಾರಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಹಾಗೂ ಸಮಿತಿಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಪ್ರಮುಖರು ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!