Monday, July 4, 2022
Home ಸಮಾಚಾರ ಜಿಲ್ಲಾ ಸುದ್ದಿ ಕರಂಬಳ್ಳಿ ದೇವಳಕ್ಕೆ ಭೇಟಿ

ಕರಂಬಳ್ಳಿ ದೇವಳಕ್ಕೆ ಭೇಟಿ

ಉಡುಪಿ: ಪುನಃಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ. ಟಿ. ರವಿ ಬುಧವಾರ ಭೇಟಿ ನೀಡಿ ದೇವರ ದರ್ಶನ ಪಡೆದರು.

ದೇವಸ್ಥಾನದ ಆಡಳಿತ ಮೊಕ್ತೇಸರ, ಶಾಸಕ ಕೆ. ರಘುಪತಿ ಭಟ್ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ, ದೇವಳದ ರಮೇಶ್ ಬಾರಿತ್ತಾಯ, ಎಸ್. ವಿ. ಭಟ್ ಹಾಗೂ ದೇವಸ್ಥಾನದ ಅರ್ಚಕರು ಇದ್ದರು.

ಶ್ರೀದೇವಸ್ಥಾನದಲ್ಲಿ ಜ. 19ರ ವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಶ್ರೀ ವೆಂಕಟರಮಣ, ಈಶ್ವರ, ಗಣಪತಿ ಮತ್ತು ಮುಖ್ಯಪ್ರಾಣ ದೇವರಿಗೆ ಪುನಃ ಪ್ರತಿಷ್ಠಾಪೂರ್ವಕ ಬ್ರಹ್ಮಕಲಶೋತ್ಸವ ನಡೆಯಲಿದೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!