Sunday, July 3, 2022
Home ಸಮಾಚಾರ ಜಿಲ್ಲಾ ಸುದ್ದಿ ಕರಂಬಳ್ಳಿ ಬ್ರಹ್ಮಕಲಶೋತ್ಸವ ಹೊರೆಕಾಣಿಕೆ ಮೆರವಣಿಗೆ

ಕರಂಬಳ್ಳಿ ಬ್ರಹ್ಮಕಲಶೋತ್ಸವ ಹೊರೆಕಾಣಿಕೆ ಮೆರವಣಿಗೆ

ಉಡುಪಿ: ಇಲ್ಲಿನ ಕರಂಬಳ್ಳಿ ಶ್ರೀ ವೇಂಕಟರಮಣ ದೇವಸ್ಥಾನದಲ್ಲಿ ಈ ತಿಂಗಳ 18ರಂದು ನಡೆಯುವ ಬ್ರಹ್ಮಕಲಶೋತ್ಸವ ಹಾಗೂ ಶ್ರೀ ವೇಂಕಟರಮಣ, ಶ್ರೀ ಈಶ್ವರ, ಶ್ರೀ ಗಣಪತಿ ಮತ್ತು ಶ್ರೀ ಮುಖ್ಯಪ್ರಾಣ ದೇವರ ಪುನಃಪ್ರತಿಷ್ಠೆ, ಅನ್ನಸಂತರ್ಪಣೆ ಇತ್ಯಾದಿ ಕಾರ್ಯಕ್ರಮಗಳ ಹೊರೆಕಾಣಿಕೆ ಮೆರವಣಿಗೆ ಗುರುವಾರ ನಡೆಯಿತು.
ಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಸಾಧು ಸಾಲ್ಯಾನ್ ಭಗವಾಧ್ವಜ ತೋರಿಸುವ ಮೂಲಕ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.

ಶ್ರೀ ವೇಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ಶಾಸಕ ಕೆ. ರಘುಪತಿ ಭಟ್ ಇದ್ದರು.

ಮೆರವಣಿಗೆ ಅಂಬಾಗಿಲು ಜನತಾ ವ್ಯಾಯಾಮ ಶಾಲೆಯಿಂದ ಹೊರಟು ದೊಡ್ಡಣ್ಣಗುಡ್ಡೆ ಮಾರ್ಗವಾಗಿ ಸಾಗಿ ವಾಜಪೇಯಿ ಪಾರ್ಕ್ ಬಳಿಯಿಂದ ಕರಂಬಳ್ಳಿ ದೇವಸ್ಥಾನಕ್ಕೆ ಆಗಮಿಸಿತು.

ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಅಂಚನ್, ಕರಂಬಳ್ಳಿ ವೇಂಕಟರಮಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಯಶಪಾಲ್ ಸುವರ್ಣ, ಉಪಾಧ್ಯಕ್ಷ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ನಗರಸಭಾ ಸದಸ್ಯರಾದ ಗಿರಿಧರ್ ಕರಂಬಳ್ಳಿ, ಪ್ರಭಾಕರ ಪೂಜಾರಿ ಮತ್ತು ಬಾಲಕೃಷ್ಣ ಶೆಟ್ಟಿ ಹಾಗೂ ಕರಂಬಳ್ಳಿ ವೇಂಕಟರಮಣ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಹಾಗೂ ಭಕ್ತರು ಪಾಲ್ಗೊಂಡಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!