Saturday, August 13, 2022
Home ಸಮಾಚಾರ ಜಿಲ್ಲಾ ಸುದ್ದಿ ಕ್ಷೇಮನಿಧಿ ಸ್ಥಾಪನೆಗಾಗಿ ಟೈಲರ್ ಗಳ ಪ್ರತಿಭಟನೆ

ಕ್ಷೇಮನಿಧಿ ಸ್ಥಾಪನೆಗಾಗಿ ಟೈಲರ್ ಗಳ ಪ್ರತಿಭಟನೆ

ಸುದ್ದಿಕಿರಣ ವರದಿ
ಮಂಗಳವಾರ, ಜುಲೈ 26

ಕ್ಷೇಮನಿಧಿ ಸ್ಥಾಪನೆಗಾಗಿ ಟೈಲರ್ ಗಳ ಪ್ರತಿಭಟನೆ
ಉಡುಪಿ: ರಾಜ್ಯದ ಸುಮಾರು 10 ಲಕ್ಷ ಮಂದಿ ಹೊಲಿಗೆ ಕೆಲಸಗಾರರಿಗೆ ಜೀವನ ಭದ್ರತೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಟೈಲರ್ ಕ್ಷೇಮನಿಧಿ ಮಂಡಳಿ ರಚಿಸಬೇಕು. 15 ದಿನದೊಳಗೆ ಬೇಡಿಕೆ ಈಡೇರದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆಯೇ ಮಿಷಿನ್ ಇಟ್ಟು ಬಟ್ಟೆ ಹೊಲಿಯುವುದಾಗಿ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಶನ್ ಸಂಘಟನಾ ಕಾರ್ಯದರ್ಶಿ ಅಬ್ದುಲ್ ಖಾದರ್ ಎಚ್ಚರಿಸಿದರು.

ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.

ಅಸಂಘಟಿತ ಕಾರ್ಮಿಕ- ಸಾಮಾಜಿಕ ಭದ್ರತಾ ಮಂಡಳಿ ಮೂಲಕ ಟೈಲರ್ ವೃತ್ತಿ ಬಾಂಧವರ ಬೇಡಿಕೆ ಈಡೇರಿಸಬೇಕು. ಮುಖ್ಯವಾಗಿ ಭವಿಷ್ಯ ನಿಧಿ ಯೋಜನೆ ಹಾಗೂ 60 ವರ್ಷ ಮೀರಿದ ಟೈಲರ್ ಗಳಿಗೆ ಮಾಸಿಕ ಪಿಂಚಣಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸಮಿತಿ ಕೋಶಾಧಿಕಾರಿ ಕೆ. ರಾಮಚಂದ್ರ, ಜಿಲ್ಲಾಧ್ಯಕ್ಷ ಗುರುರಾಜ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಪಾಲನ್, ಉಡುಪಿ ಟೈಲರ್ ಸಹಕಾರ ಸಂಘದ ಅಧ್ಯಕ್ಷ ದಯಾನಂದ ಕೋಟ್ಯಾನ್, ಪದಾಧಿಕಾರಿಗಳಾದ ಶಾಂತಾ ಬಸ್ರೂರು, ಹೇಮಾ ಮೊದಲಾದವರಿದ್ದರು.

ಸುಮಾರು 2 ಸಾವಿರಕ್ಕೂ ಮಿಕ್ಕಿದ ಟೈಲರ್ ಗಳು ಪ್ರತಿಭಟನೆ ಅಂಗವಾಗಿ ಮಣಿಪಾಲ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!