Saturday, August 13, 2022
Home ಸಮಾಚಾರ ಜಿಲ್ಲಾ ಸುದ್ದಿ ರಾಮನಗರ ಘಟನೆ ಖಂಡಿಸಿ ಬಿಜೆಪಿ ಪ್ರತಿಭಟನೆ

ರಾಮನಗರ ಘಟನೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಸುದ್ದಿಕಿರಣ ವರದಿ
ಮಂಗಳವಾರ, ಜನವರಿ 4, 2022

ರಾಮನಗರ ಘಟನೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಉಡುಪಿ: ರಾಮನಗರದಲ್ಲಿ ಸೋಮವಾರ ನಡೆದ ಘಟನೆಯನ್ನು ಖಂಡಿಸಿ ಮಂಗಳವಾರ ಬಿಜೆಪಿ ಪ್ರತಿಭಟನೆ ನಡೆಸಿತು.

ಸರಕಾರಿ‌ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎದುರಲ್ಲೇ ರಾಜ್ಯ ಉನ್ನತ ಶಿಕ್ಷಣ ಸಚಿವ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ. ಎನ್. ಅಶ್ವತ್ಥನಾರಾಯಣ ಅವರ ಮೇಲೆ ಹಲ್ಲೆಗೆ ಮುಂದಾಗಿ ಗೂಂಡಾಗಿರಿ ಪ್ರದರ್ಶಿಸಿರುವ ಸಂಸದ, ಕಾಂಗ್ರೆಸ್ ನ ಡಿ.ಕೆ. ಸುರೇಶ್ ಮತ್ತು ವಿಧಾನ ಪರಿಷತ್ ಸದಸ್ಯ ಕಾಂಗ್ರೆಸ್ ನ ಎಸ್. ರವಿ ಯವರ ಗೂಂಡಾ ಸಂಸ್ಕೃತಿ ಖಂಡನೀಯ ಎಂದು ಪ್ರತಿಭಟನಾಕಾರರು ಪುನರುಚ್ಚರಿಸಿದರು.

ಜಿಲ್ಲಾ ಬಿಜೆಪಿ ಕಚೇರಿ ಎದುರು ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಕುಯಿಲಾಡಿ ಸುರೇಶ್ ನಾಯಕ್ ಮತ್ತು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಕಾಂಗ್ರೆಸ್ ನ ಗೂಂಡಾ ಸಂಸ್ಕೃತಿಯನ್ನು ಖಂಡಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ ಎಸ್. ಕಲ್ಮಾಡಿ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಗೀತಾಂಜಲಿ ಎಸ್. ಸುವರ್ಣ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ನಿಕಟಪೂರ್ವ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ, ಹಿಂದುಸ್ಥಾನ್ ಶಿಪ್ ಯಾರ್ಡ್ ಸ್ವತಂತ್ರ ನಿರ್ದೇಶಕ ಅಂಡಾರು ದೇವಿಪ್ರಸಾದ್ ಶೆಟ್ಟಿ, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್, ಪ್ರಧಾನ ಕಾರ್ಯದರ್ಶಿಗಳಾದ ಆಲ್ವಿನ್ ಡಿ’ಸೋಜ ಮತ್ತು ಆಸಿಫ್ ಕಟಪಾಡಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯ ಕುಮಾರ್ ಉದ್ಯಾವರ ಮತ್ತು ಜಗದೀಶ್ ಆಚಾರ್ಯ ಕಪ್ಪೆಟ್ಟು, ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್, ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ ಮಾಂಬೆಟ್ಟು, ಉಡುಪಿ ನಗರ ಉಪಾಧ್ಯಕ್ಷ ಕೃಷ್ಣಪ್ಪ ಜತ್ತನ್, ಕಾರ್ಯದರ್ಶಿ ದಯಾಶಿನಿ, ನಗರಸಭಾ ಸದಸ್ಯರಾದ ಪ್ರಭಾಕರ ಪೂಜಾರಿ, ಮಂಜುನಾಥ್ ಮಣಿಪಾಲ್, ರಜನಿ ಹೆಬ್ಬಾರ್, ವಿಜಯಲಕ್ಷ್ಮಿ, ಚಂದ್ರಶೇಖರ್, ಅಶೋಕ್ ನಾಯ್ಕ್, ಸುಂದರ ಕಲ್ಮಾಡಿ ಮತ್ತು ದೇವದಾಸ್ ಶೆಟ್ಟಿಗಾರ್, ಪ್ರಮುಖರಾದ ಉಪೇಂದ್ರ ನಾಯಕ್, ವಿಜೇತ್ ಕುಮಾರ್, ಚಂದ್ರಶೇಖರ ಪ್ರಭು, ದಿಲೇಶ್ ಶೆಟ್ಟಿ, ಜುನೈದ್, ಅಪ್ಸರ್ ಉಚ್ಚಿಲ, ವಿಜಯ ಪೂಜಾರಿ, ನಾಗರಾಜ್ ಕರ್ಕೇರ, ಸಂತೋಷ್ ಆಚಾರ್ಯ, ಆನಂದ ಸುವರ್ಣ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!