ಉಡುಪಿ: ಪ್ರಬುದ್ಧ ರಾಜಕಾರಣಿ, ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿರುವ ಬಸವರಾಜ ಬೊಮ್ಮಾಯಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿ ಹರ್ಷ ವ್ಯಕ್ತ ಪಡಿಸಿದೆ.
ವಿವಿಧ ಕ್ಷೇತ್ರಗಳಲ್ಲಿ ಅಪಾರ ಅನುಭವ ಹೊಂದಿರುವ ಹಿರಿಯ ರಾಜಕೀಯ ಮುತ್ಸದ್ಧಿ ಬಸವರಾಜ ಬೊಮ್ಮಾಯಿ ರಾಜ್ಯದ 30ನೇ ಮುಖ್ಯಮಂತ್ರಿಯಾಗಿರುವ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ ಸಲ್ಲಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬೊಮ್ಮಾಯಿ ಸಾರ್ಥಕ ಜನಪರ ಆಡಳಿತ ನೀಡುವ ಮೂಲಕ ಮಾದರಿ ಮುಖ್ಯಮಂತ್ರಿಯಾಗಿ ಯಶಸ್ಸು ಸಾಧಿಸುವಂತಾಗಲಿ ಎಂದು ಹಾರೈಸಿದ್ದಾರೆ.