Wednesday, July 6, 2022
Home ಸಮಾಚಾರ ಅಪರಾಧ ಕಾರ್ಕಳ ಪ್ರಕರಣ: ಸಮಗ್ರ ತನಿಖೆಗೆ ಆದೇಶ

ಕಾರ್ಕಳ ಪ್ರಕರಣ: ಸಮಗ್ರ ತನಿಖೆಗೆ ಆದೇಶ

ಆತ್ಮೀಯ ಓದುಗರೇ,
ಕೋವಿಡ್ ಅನ್ ಲಾಕ್ ಹೇಳಿಲ್ಲ; ಹೇಳಿದ್ದು ಸರ್ಕಾರ. ಇನ್ನೂ ಸಂಪೂರ್ಣ ಕೊರೊನಾ ತೊಲಗಿಲ್ಲ. ಹಾಗಾಗಿ ಸ್ವಚ್ಛತೆ ಕಾಪಾಡಿ, ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಪಾಲಿಸಿ. ನೀವು ಸುರಕ್ಷಿತವಿರಿ, ಅನ್ಯರೂ ಸುರಕ್ಷಿತರಾಗಿರಲಿ. ಕೊರೊನಾದಿಂದ ರಕ್ಷಣೆ ನಮ್ಮ ಕೈಯ್ಯಲ್ಲೇ ಇದೆ. ಅಲ್ಲವೇ?
******************************

(ಸುದ್ದಿಕಿರಣ ವರದಿ)

ಕಾರ್ಕಳ, ಜು. 9: ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತನಿಗೆ ಪೊಲೀಸರು ಹಲ್ಲೆ ನಡೆಸಿರುವ ಘಟನೆಯ ಸಮಗ್ರ ತನಿಖೆಗೆ ಎಸ್.ಪಿ. ವಿಷ್ಣುವರ್ಧನ್ ಆದೇಶ ನೀಡಿದ್ದಾರೆ.

ಈ ಪ್ರಕರಣ ರಾಜಕೀಯ ಬಣ್ಣ ಪಡೆದುಕೊಂಡಿದೆ.

ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ಹಿರ್ಗಾನ ಎಂಬವರಿಗೆ ಕಾರ್ಕಳ ನಗರ ಪೊಲೀಸ್ ಠಾಣೆ ಎಸ್.ಐ. ಮಧು ಹಲ್ಲೆ ನಡೆಸಿದ್ದಾಗಿ ಕಾಂಗ್ರೆಸ್ ಆರೋಪಿಸಿದೆ. ವರ್ಷದ ಹಿಂದೆ ಫೇಸ್ ಬುಕ್ ನಲ್ಲಿ ಹಾಕಿದ್ದ ಪೋಸ್ಟ್ ವೊಂದಕ್ಕೆ ಸಂಬಂಧಿಸಿದಂತೆ ರಾಧಾಕೃಷ್ಣ ಅವರನ್ನು ವಿಚಾರಣೆಗಾಗಿ ಪೊಲೀಸರು ಠಾಣೆಗೆ ಕರೆಸಿಕೊಂಡಿದ್ದರು.

ಯೋಧರ ವಿರುದ್ಧ ರಾಧಾಕೃಷ್ಣ ನಾಯಕ್ ಪೋಸ್ಟ್ ಹಾಕಿದ್ದಾಗಿ ಆರೋಪಿಸಲಾಗಿತ್ತು. ಆದರೆ ತನ್ನ ಹೆಸರಿನಲ್ಲಿ ನಕಲಿ ಅಕೌಂಟ್ ಮಾಡಿ ಈ ಪೋಸ್ಟ್ ಹಾಕಲಾಗಿದೆ ಎಂದು ರಾಧಾಕೃಷ್ಣ ವಾದಿಸುತ್ತ ಬಂದಿದ್ದರು.

ತನಿಖೆಗೆ ಹಾಜರಾದ ವೇಳೆ ಎಸ್.ಐ. ಮಧು ಹಲ್ಲೆ ನಡೆಸಿದ್ದಾಗಿ ರಾಧಾಕೃಷ್ಣ ದೂರು ನೀಡಿದ್ದರು.

ಪ್ರಕರಣದ ಸಮಗ್ರ ತನಿಖೆಗೆ ಕುಂದಾಪುರ ಡಿಎಸ್.ಪಿ. ಅವರಿಗೆ ತನಿಖೆಗೆ ನಿಯೋಜಿಸಲಾಗಿದ್ದು, ತನಿಖೆ ನಡೆಸಿ ವರದಿ ನೀಡುವಂತೆ ಎಸ್.ಪಿ. ಆದೇಶಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!