Monday, August 15, 2022
Home ಸಮಾಚಾರ ರಾಜ್ಯ ವಾರ್ತೆ ಕೆಎಂಎಫ್ ಉತ್ಪನ್ನಗಳು ದುಬಾರಿ

ಕೆಎಂಎಫ್ ಉತ್ಪನ್ನಗಳು ದುಬಾರಿ

ಸುದ್ದಿಕಿರಣ ವರದಿ
ಭಾನುವಾರ, ಜುಲೈ 17

ಕೆಎಂಎಫ್ ಉತ್ಪನ್ನಗಳು ದುಬಾರಿ
ಬೆಂಗಳೂರು: ಜುಲೈ 18ರಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಮೇಲೆ ಜಿಎಸ್.ಟಿ ದರ ವಿಧಿಸುತ್ತಿದ್ದು, ಅದರ ಬೆನ್ನಲ್ಲೇ ನಂದಿನಿ ಉತ್ಪನ್ನಗಳ ದರವನ್ನೂ ಕೆಎಂಎಫ್ ನಿಂದ ಪರಿಷ್ಕರಣೆ ಮಾಡಲಾಗುತ್ತಿದ್ದು, ಹಾಲು ಹೊರತುಪಡಿಸಿ ಮೊಸರು, ಮಜ್ಜಿಗೆ, ಲಸ್ಸಿ ದರ ಹೆಚ್ಚಳ ಮಾಡಿ ಗ್ರಾಹಕರಿಗೆ ಶಾಕ್ ನೀಡಿದೆ.

ಕರ್ನಾಟಕ ಸಹಕಾರಿ ಹಾಲು ಉತ್ಪಾದಕ ಮಹಾಮಂಡಳಿ ನಿಯಮಿತ (ಕೆಎಂಎಫ್) ಈ ಬಗ್ಗೆ ಪ್ರಕಟಣೆ ನೀಡಿ, ಕೇಂದ್ರ ಸರ್ಕಾರದ ವಿತ್ತ ಸಚಿವಾಲಯ ಮೊಸರು, ಮಜ್ಜಿಗೆ ಮತ್ತು ಸಿಹಿ ಲಸ್ಸಿ ಉತ್ಪನ್ನಗಳ ಮೇಲೆ ಜಿಎಸ್.ಟಿ ವಿಧಿಸಿರುವ ಹಿನ್ನೆಲೆಯಲ್ಲಿ ನಂದಿನಿ ಮೊಸಲು, ಮಜ್ಜಿಗೆ ಮತ್ತು ಲಸ್ಸಿ ಪೊಟ್ಟಣಗಳ ದರ ಪರಿಷ್ಕರಿಸಲಾಗುತ್ತಿದೆ.

ಮೊಸರು 200 ಗ್ರಾ ರೂ. 10ರಿಂದ 12 ರೂ ಆಗಲಿದೆ. 500 ಗ್ರಾಂ ರೂ. 22ರಿಂದ 24 ರೂ., ಮಜ್ಜಿಗೆ ಸ್ಯಾಚೆ 200 ಮಿ.ಲೀ. ರೂ. 7 ಇದ್ದದ್ದು 8 ರೂ. ಆಗಲಿದೆ. ಟೆಟ್ರಾ ಪ್ಯಾಕ್ 10 ರೂ.ನಿಂದ 11 ರೂ.ಗೆ ಏರಿಕೆಯಾಗಲಿದೆ. ಪೆಟ್ ಬಾಟಲ್ ರೂ. 12ರಿಂದ 13 ರೂ.ಗೆ ಹೆಚ್ಚಳವಾಗಲಿದೆ.

ಲಸ್ಸಿ 200 ಮಿಲಿ ಸ್ಯಾಚೆ ರೂ. 10ರಿಂದ 11 ರೂ.ಗೆ ಏರಿಕೆಯಾಗಲಿದೆ. ಟೆಟ್ರಾ ಪ್ಯಾಕ್ ಸಾದಾ ರೂ. 20ರಿಂದ 21 ರೂ., ಟೆಟ್ರಾ ಪ್ಯಾಕ್ ಮ್ಯಾಂಗೋ ರೂ. 25ರಿಂದ 27 ರೂ., ಪೆಟ್ ಬಾಟಲ್ ಸಾದಾ ರೂ. 15 ರಿಂದ 16 ರೂ. ಹಾಗೂ ಪೆಟ್ ಬಾಟಲ್ ಮ್ಯಾಂಗೋ ರೂ. 20ರಿಂದ 21 ರೂ. ಹೆಚ್ಚಳವಾಗಲಿದೆ.

ಮೊಸರು ಮತ್ತು ಮಜ್ಜಿಗೆ ಪೊಟ್ಟಣಗಳ ಮೇಲೆ ಈಗಾಗಲೇ ಹಳೇ ದರ ಮುದ್ರಿತವಾಗಿದ್ದು, ಮುದ್ರಿತ ದರಗಳ ಪ್ಯಾಕಿಂಗ್ ಸಾಮಗ್ರಿಗಳ ದಾಸ್ತಾನು ಮುಗಿಯುವ ವರೆಗೆ ಇಂಕ್ ಜೆಟ್ ಮೂಲಕ ಪರಿಷ್ಕೃತ ದರಗಳನ್ನು ಪೊಟ್ಟಣಗಳ ಮೇಲೆ ಮುದ್ರಿಸಿ ಮಾರುಕಟ್ಟೆಗೆ ಸರಬರಾಜು ಮಾಡಲಾಗುತ್ತದೆ. ಎಲ್ಲಾ ಗ್ರಾಹಕರು, ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!