Wednesday, July 6, 2022
Home ಸಮಾಚಾರ ಜಿಲ್ಲಾ ಸುದ್ದಿ ಕೊಲ್ಲೂರು ದೇವಳ ಅವ್ಯವಹಾರ ತನಿಖೆಗೆ ಆದೇಶ

ಕೊಲ್ಲೂರು ದೇವಳ ಅವ್ಯವಹಾರ ತನಿಖೆಗೆ ಆದೇಶ

ಉಡುಪಿ: ರಾಜ್ಯದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದಲ್ಲಿ ನಡೆದಿರುವ ಅವ್ಯವಹಾರಗಳ ಕುರಿತ ತನಿಖೆಗೆ ಆದೇಶ ನೀಡಿರುವ ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿನಂದನಾರ್ಹರು ಎಂದು ಕರ್ನಾಟಕ ದೇವಸ್ಥಾನ ಮತ್ತು ಧಾರ್ಮಿಕ ಮಹಾಸಂಘ ವಕ್ತಾರ ಗುರುಪ್ರಸಾದ ಗೌಡ ಹೇಳಿದರು.

ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಧಾರ್ಮಿಕ ದತ್ತಿ ಇಲಾಖೆ ನಿರ್ದೇಶಕರ ನೇತೃತ್ವದಲ್ಲಿ ಶನಿವಾರದಿಂದ ತನಿಖೆ ನಡೆಯುವ ಮಾಹಿತಿ ಲಭಿಸಿದ್ದು, ಈ ಸಂದರ್ಭದಲ್ಲಿ ಅವ್ಯವಹಾರ ಕುರಿತು ಮಾಹಿತಿ ನೀಡಿರುವ ತಮ್ಮ ಸಂಸ್ಥೆಗೂ ದಾಖಲೆ ಪರಿಶೀಲನೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಬಹುತೇಕ ದೇವಳಗಳಲ್ಲಿ ಅವ್ಯವಹಾರ ನಡೆಯುತ್ತಿದೆ. ಭಕ್ತರು ಕಾಣಿಕೆ ರೂಪದಲ್ಲಿ ನೀಡಿದ ನಗ, ನಗದು ಅಪವ್ಯಯವಾಗುತ್ತಿದೆ. ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆ ಜಾಗೃತಿ ಮೂಡಿಸುವಲ್ಲಿ ಶ್ರಮಿಸುತ್ತಿದೆ. ರಾಜ್ಯದಲ್ಲಿ 34,560 ದೇವಳಗಳು ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಬರಲಿದ್ದು, ಆ ಪೈಕಿ ಎ ದರ್ಜೆಯ ದೇವಳಗಳ ವ್ಯವಹಾರ ಬಗ್ಗೆ ಮಾಹಿತಿ ಹಕ್ಕು ಕಾಯ್ದೆಯಡಿ ವಿವರ ಕೇಳಲಾಗಿದೆ ಎಂದರು.

ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳ ಸದಸ್ಯರಾದ ಮಧುಸೂದನ ಅಯ್ಯರ್, ದಿನೇಶ ಎಂ. ಪಿ. ಮತ್ತು ಶ್ರೀನಿವಾಸ, ಹಿಂದೂ ಜನಜಾಗೃತಿ ಸಮಿತಿಯ ವಿಜಯಕುಮಾರ್ ಇದ್ದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!