Thursday, July 7, 2022
Home ಸಮಾಚಾರ ರಾಜ್ಯ ವಾರ್ತೆ ಸರ್ಕಾರಿ ಕಾರು ತ್ಯಜಿಸಿದ ಕೋಟ

ಸರ್ಕಾರಿ ಕಾರು ತ್ಯಜಿಸಿದ ಕೋಟ

ಬೆಂಗಳೂರು: ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಲೇ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸರ್ಕಾರಿ ಕಾರು ತ್ಯಜಿಸಿ ಸರಳತೆ ಮೆರೆದಿದ್ದಾರೆ.

ಅವರು ಯಡಿಯೂರಪ್ಪ ಸರ್ಕಾರದಲ್ಲಿ ಹಿಂದೂ ಧಾರ್ಮಿಕ ದತ್ತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾಗಿದ್ದರು.

ಸೋಮವಾರ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ಸಚಿವ ಶ್ರೀನಿವಾಸ ಪೂಜಾರಿ ಸರಕಾರಿ ಕಾರು ತ್ಯಜಿಸಿ ಬಾಡಿಗೆ ವಾಹನದಲ್ಲಿ ತೆರಳಿದರು.

ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲು ನಯವಾಗಿ ನಿರಾಕರಿಸಿದ ನಿಕಟಪೂರ್ವ ಸಚಿವ ಕೋಟ, ಯಡಿಯೂರಪ್ಪನವರು ರಾಜ್ಯದ ಬಡವರ ಬಂಧುವಾಗಿ ಉತ್ತಮ ಆಡಳಿತ ನಡೆಸಿದ್ದರು ಎಂದಷ್ಟೆ ಪ್ರತಿಕ್ರಿಯಿಸಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!