Wednesday, July 6, 2022
Home ಸಮಾಚಾರ ಜಿಲ್ಲಾ ಸುದ್ದಿ ದ.ಕ. ಜಿಲ್ಲಾ ಬಿಜೆಪಿ ಕಚೇರಿಗೆ ಸಚಿವ ಕೋಟ ಭೇಟಿ

ದ.ಕ. ಜಿಲ್ಲಾ ಬಿಜೆಪಿ ಕಚೇರಿಗೆ ಸಚಿವ ಕೋಟ ಭೇಟಿ

ದ.ಕ. ಜಿಲ್ಲಾ ಬಿಜೆಪಿ ಕಚೇರಿಗೆ ಸಚಿವ ಕೋಟ ಭೇಟಿ

(ಸುದ್ದಿಕಿರಣ ವರದಿ)
ಮಂಗಳೂರು: ಬೊಮ್ಮಾಯಿ ಸರಕಾರದಲ್ಲಿ ರಾಜ್ಯ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಇಲ್ಲಿನ ದ.ಕ. ಜಿಲ್ಲಾ ಬಿಜೆಪಿ ಕಚೇರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಪಾರದರ್ಶಕ ಆಡಳಿತ ತರುವ ಮೂಲಕ ಇಲಾಖೆ ಸವಲತ್ತು ಅರ್ಹ ಬಡವರಿಗೆ ತಲುಪಿಸಲು ಯತ್ನಿಸುವುದಾಗಿ ತಿಳಿಸಿದರು.

ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಮೂಡುಬಿದಿರೆ ಅವರು ಸಚಿವ ಕೋಟ ಅವರನ್ನು ಗೌರವಿಸಿದರು.

ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಶಾಸಕ ವೇದವ್ಯಾಸ ಕಾಮತ್, ಮಹಾನಗರಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಮೀನುಗಾರರ ನಿಗಮ ಅಧ್ಯಕ್ಷ ನಿತಿನ್ ಕುಮಾರ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಸಹ ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕಸ್ತೂರಿ ಪಂಜ ಮತ್ತು ಸುಧೀರ್ ಶೆಟ್ಟಿ ಕಣ್ಣೂರ್, ಪಕ್ಷ ಪ್ರಮುಖರಾದ ಗಣೇಶ್ ಹೊಸಬೆಟ್ಟು, ಈಶ್ವರ್ ಕಟೀಲ್, ಪ್ರಭಾಮಾಲಿನಿ, ರಾಮದಾಸ್ ಬಂಟ್ವಾಳ, ಭಾರತೀಶ್ ಕೊಡಗು, ಸುಮಂಗಲ ರಾವ್, ಜಗದೀಶ ಶೇಣವ, ವಿಜಯ ಕುಮಾರ್ ಶೆಟ್ಟಿ ಮೊದಲಾದವರಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!