ಉಡುಪಿ: ಭಾರತ ಸರಕಾರದ ಆಯುಷ್ ಇಲಾಖೆ ಸಚಿವ ಶ್ರೀಪಾದ್ ಎಸ್ಸೋ ನಾಯಕ್ ಭಾನುವಾರ ಇಲ್ಲಿನ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು.
ಉಡುಪಿ ಶಾಸಕ ಕೆ. ರಘುಪತಿ ಭಟ್, ಆಯುರ್ವೇದ ವೈದ್ಯ ಡಾ. ತನ್ಮಯ್ ಗೋಸ್ವಾಮಿ, ನೇತ್ರತಜ್ಞ ಡಾ. ಕೃಷ್ಣಪ್ರಸಾದ್, ಮಠದ ವ್ಯವಸ್ಥಾಪಕ ಗೋವಿಂದರಾಜ್, ಪಿ.ಆರ್.ಓ ಶ್ರೀಶ ಭಟ್ ಕಡೆಕಾರು ಇದ್ದರು