Saturday, July 2, 2022
Home ಸಮಾಚಾರ ರಾಜ್ಯ ವಾರ್ತೆ ರಾಜ್ಯಪಾಲರಿಂದ ಪ್ರಮಾಣವಚನ ಸ್ವೀಕರಿಸಿದ ಲೋಕಾಯುಕ್ತ ನ್ಯಾ. ಪಾಟೀಲ್

ರಾಜ್ಯಪಾಲರಿಂದ ಪ್ರಮಾಣವಚನ ಸ್ವೀಕರಿಸಿದ ಲೋಕಾಯುಕ್ತ ನ್ಯಾ. ಪಾಟೀಲ್

ಸುದ್ದಿಕಿರಣ ವರದಿ
ಬುಧವಾರ, ಜೂನ್ 15

ರಾಜ್ಯಪಾಲರಿಂದ ಪ್ರಮಾಣವಚನ ಸ್ವೀಕರಿಸಿದ ಲೋಕಾಯುಕ್ತ ನ್ಯಾ. ಪಾಟೀಲ್
ಬೆಂಗಳೂರು: ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡಿರುವ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು.

ಪ್ರಮಾಣ ವಚನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿಪಕ್ಷ ನಾಯಕ ಎಸ್. ಸಿದ್ಧರಾಮಯ್ಯ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ವಿ. ಸೋಮಣ್ಣ ಮತ್ತು ಹಾಲಪ್ಪ ಆಚಾರ್, ಶಾಸಕರು ಮೊದಲಾದವರಿದ್ದರು.

ನ್ಯಾ. ಪಾಟೀಲ್ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದರು.

 

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!