Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಮಹಾಲಕ್ಷ್ಮೀ ಕೋ- ಆಪರೇಟಿವ್ ಬ್ಯಾಂಕ್ ಡೈರಿ ಬಿಡುಗಡೆ

ಮಹಾಲಕ್ಷ್ಮೀ ಕೋ- ಆಪರೇಟಿವ್ ಬ್ಯಾಂಕ್ ಡೈರಿ ಬಿಡುಗಡೆ

ಮಹಾಲಕ್ಷ್ಮೀ ಕೋ- ಆಪರೇಟಿವ್ ಬ್ಯಾಂಕ್ ಡೈರಿ ಬಿಡುಗಡೆ

ಉಡುಪಿ: ಇಲ್ಲಿನ ಮಹಾಲಕ್ಷ್ಮೀ ಕೋ- ಆಪರೇಟಿವ್ ಬ್ಯಾಂಕಿನ 2022ನೇ ಸಾಲಿನ ಡೈರಿಯನ್ನು ಅಂಬಲಪಾಡಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ| ಜಿ. ಶಂಕರ್ ಬಿಡುಗಡೆಗೊಳಿಸಿದರು

ಬಳಿಕ ಮಾತನಾಡಿದ ಅವರು, ಬ್ಯಾಂಕ್ ಅಧ್ಯಕ್ಷ ಯಶಪಾಲ್ ಸುವರ್ಣ ಅಧ್ಯಕ್ಷತೆಯಲ್ಲಿ ಗ್ರಾಹಕ ಸ್ನೇಹಿ ಸೇವೆಯ ಮೂಲಕ ಕರಾವಳಿ ಕರ್ನಾಟಕದ ಅಗ್ರಗಣ್ಯ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ರಾಜ್ಯದ 70 ಲಕ್ಷ ಮೀನುಗಾರ ಸಮುದಾಯಕ್ಕೆ ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಶಾಖೆಗಳನ್ನು ವಿಸ್ತರಿಸುವ ಮೂಲಕ ಗ್ರಾಹಕರಿಗೆ ಉತ್ತಮ ಸೇವೆ ನೀಡುವಂತಾಗಲಿ ಎಂದು ಹಾರೈಸಿದರು.

ಚೆಕ್ ಹಸ್ತಾಂತರ
ಈ ಸಂದರ್ಭದಲ್ಲಿ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಗೆ ಬ್ಯಾಂಕಿನ ವತಿಯಿಂದ 30 ಲಕ್ಷ ರೂ. ದೇಣಿಗೆಯ ದ್ವಿತೀಯ ಹಂತದ 5 ಲಕ್ಷ ರೂ. ಮೊತ್ತದ ಚೆಕ್ ನ್ನು ಜಿ. ಶಂಕರ್ ಅವರಿಗೆ ಹಸ್ತಾಂತರಿಸಲಾಯಿತು.

ಉತ್ತರ ಕನ್ನಡ ಜಿಲ್ಲೆಗೆ ವಿಸ್ತರಣೆ
ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಅಧ್ಯಕ್ಷ ಯಶಪಾಲ್ ಸುವರ್ಣ, ಗ್ರಾಹಕರು ಮತ್ತು ಸದಸ್ಯರ ಸಹಕಾರದಿಂದ ಬ್ಯಾಂಕ್ ಉತ್ತಮ ಪ್ರಗತಿ ಸಾಧಿಸಿದ್ದು, ಈಗಾಗಲೇ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳನ್ನು ಹೊಂದಿರುವ ಮಹಾಲಕ್ಷ್ಮೀ ಕೋ- ಆಪರೇಟಿವ್ ಬ್ಯಾಂಕ್ ಶೀಘ್ರದಲ್ಲಿಯೇ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಕುಮಟ ಮತ್ತು ಕಾರವಾರ ತಾಲೂಕುಗಳಲ್ಲಿ ಶಾಖೆ ಆರಂಭಿಸಲು ಆಡಳಿತ ಮಂಡಳಿ ಕಾರ್ಯಪ್ರವೃತ್ತವಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿದ್ದ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಮತ್ತು ಬ್ಯಾಂಕಿನ ಲೆಕ್ಕಪರಿಶೋಧಕ ಗಣೇಶ್ ಬಿ. ಕಾಂಚನ್ ಬ್ಯಾಂಕಿನ ಕಾರ್ಯಚಟುವಟಿಕೆ ಬಗ್ಗೆ ಶ್ಲಾಘಿಸಿದರು.

ಬ್ಯಾಂಕಿನ ನಿರ್ದೇಶಕರಾದ ವೆಂಕಟರಮಣ ಕಿದಿಯೂರು, ವಾಸುದೇವ ಸಾಲ್ಯಾನ್, ಶಶಿಕಾಂತ ಬಿ. ಕೋಟ್ಯಾನ್, ಹೇಮನಾಥ ಜೆ. ಪುತ್ರನ್, ಶೋಭೇಂದ್ರ ಸಸಿಹಿತ್ಲು, ಕೆ. ಸಂಜೀವ ಶ್ರೀಯಾನ್, ರಾಮ ನಾಯ್ಕ್ ಎಚ್., ವಿನಯ ಕರ್ಕೇರ, ನಾರಾಯಣ ಟಿ. ಅಮೀನ್, ಸುರೇಶ್ ಬಿ. ಕರ್ಕೇರ, ಬಿ. ಬಿ. ಕಾಂಚನ್, ಶಿವರಾಮ ಕುಂದರ್, ವನಜಾ ಎಚ್. ಕಿದಿಯೂರು ಮತ್ತು ವನಜಾ ಜೆ. ಪುತ್ರನ್, ವೃತ್ತಿಪರ ನಿರ್ದೇಶಕ ಮಂಜುನಾಥ ಎಸ್. ಕೆ, ಬ್ಯಾಂಕಿಂಗ್ ಸಲಹೆಗಾರ ಆನಂದ ಎನ್. ಪುತ್ರನ್ ಹಾಗೂ ಪ್ರಧಾನ ವ್ಯವಸ್ಥಾಪಕ ಜಿ. ಕೆ. ಶೀನ ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!