Thursday, July 7, 2022
Home ಕ್ರೀಡೆ ಮಕ್ಕಳ ಅಭಿವೃದ್ಧಿಗೆ ಕ್ರೀಡಾಕೂಟ ಪೂರಕ

ಮಕ್ಕಳ ಅಭಿವೃದ್ಧಿಗೆ ಕ್ರೀಡಾಕೂಟ ಪೂರಕ

ಉಡುಪಿ: ಕ್ರೀಡಾಪಟುಗಳು ಹಾಗೂ ಕ್ರೀಡೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬ್ಯಾಡ್ಮಿಂಟನ್ ಪಂದ್ಯಾಕೂಟವನ್ನು ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಂಡಿದ್ದು, ಮುಂದೆ ಜಿಲ್ಲೆಯ ಇತರ ತಾಲೂಕುಗಳಲ್ಲಿಯೂ ಪಂದ್ಯಾಕೂಟ ಹಮ್ಮಿಕೊಳ್ಳಲಾಗುವುದು. ಮಕ್ಕಳ ಅಭಿವೃದ್ಧಿಗೆ ಕ್ರೀಡಾಕೂಟ ಸಹಕಾರಿ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದರು.

ಶನಿವಾರ ಅಜ್ಜರಕಾಡು ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿ. ಪಂ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲೆ ಹಾಗೂ ಡಾ| ಜಿ. ಶಂಕರ್ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಸಂಯುಕ್ತಾಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಕೂಟ ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಪ್ರತಿಭೆಗಳನ್ನು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಲು ಕ್ರೀಡಾಕೂಟ ಅಗತ್ಯವಾಗಿದೆ. ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ತೊಡಗಿಕೊಳ್ಳಬೇಕು. ಕ್ರೀಡೆಯಿಂದ ತಾಳ್ಮೆ ಹಾಗೂ ಏಕಾಗ್ರತೆ ಸಾಧ್ಯ. ಆದ್ದರಿಂದ ಬಿಡುವಿನ ವೇಳೆಯಲ್ಲಿ ವಿವಿಧ ರೀತಿಯ ಕ್ರೀಡಾಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್ ಅಧ್ಯಕ್ಷತೆ ವಹಿಸಿದ್ದರು.

ಜಿ. ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಅಜ್ಜರಕಾಡು ಕಾಲೇಜು ಪ್ರಾಂಶುಪಾಲ ಡಾ| ಭಾಸ್ಕರ ಶೆಟ್ಟಿ ಇದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ| ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!