Saturday, August 13, 2022
Home ಸಮಾಚಾರ ರಾಷ್ಟ್ರೀಯ ವಾರ್ತೆ ಉಪರಾಷ್ಟ್ರಪತಿ ಚುನಾವಣೆ: ಮಾರ್ಗರೇಟ್ ಆಳ್ವ ವಿಪಕ್ಷ ಅಭ್ಯರ್ಥಿ

ಉಪರಾಷ್ಟ್ರಪತಿ ಚುನಾವಣೆ: ಮಾರ್ಗರೇಟ್ ಆಳ್ವ ವಿಪಕ್ಷ ಅಭ್ಯರ್ಥಿ

ಸುದ್ದಿಕಿರಣ ವರದಿ
ಭಾನುವಾರ, ಜುಲೈ 17

ಉಪರಾಷ್ಟ್ರಪತಿ ಚುನಾವಣೆ: ಮಾರ್ಗರೇಟ್ ಆಳ್ವ ವಿಪಕ್ಷ ಅಭ್ಯರ್ಥಿ
ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಯ ವಿಪಕ್ಷ ಅಭ್ಯರ್ಥಿಯನ್ನಾಗಿ ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವ ಅವರನ್ನು ಎನ್.ಸಿ.ಪಿ. ಪ್ರಕಟಿಸಿದೆ.

ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ಸಭೆಯ ಬಳಿಕ ಎನ್.ಸಿ.ಪಿ. ಅಧ್ಯಕ್ಷ ಶರದ್ ಪವಾರ್ ಅವರು ಮಾರ್ಗರೇಟ್ ಆಳ್ವಾ ಹೆಸರನ್ನು ಘೋಷಿಸಿದರು.

ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಆಳ್ವಾ ಅವರು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಬಿಎ ಪದವಿ ಪಡೆದರು. ಸರ್ಕಾರಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದು ವಕೀಲೆಯಾಗಿ, ಬಳಿಕ ರಾಜಕಾರಣದಲ್ಲಿ ತಮ್ಮನ್ನು ತೊಡಗಿಸಿಕೊಂಡರು.

80ರ ಹರೆಯದ ಮಾರ್ಗರೇಟ್ ಆಳ್ವಾ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ, ಗೋವಾ ಗುಜರಾತ್ ರಾಜಸ್ಥಾನ ಮತ್ತು ಉತ್ತರಾಖಂಡದ ರಾಜ್ಯಪಾಲೆಯಾಗಿ ತನ್ನ ಅಧಿಕಾರಾವಧಿಯ ಅಂತ್ಯದ ವರೆಗೆ ಸೇವೆ ಸಲ್ಲಿಸಿದ ಹಿರಿಯ ಕಾಂಗ್ರೆಸ್ ನಾಯಕಿ.

ಆಳ್ವಾ ಆಯ್ಕೆಗೆ ಕರಾವಳಿ ಜಿಲ್ಲೆಗಳಲ್ಲಿ ಹರ್ಷ ವ್ಯಕ್ತವಾಗಿದೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!