Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಮಾಸ್ಕ್, ಸ್ಯಾನಿಟೈಸರ್ ವಿತರಣೆ

ಮಾಸ್ಕ್, ಸ್ಯಾನಿಟೈಸರ್ ವಿತರಣೆ

ಉಡುಪಿ: ಕ್ರೆಡಿಟ್ ಆಕ್ಸಿಸ್ ಗ್ರಾಮೀಣ್ ಲಿಮಿಟೆಡ್ (ಗ್ರಾಮೀಣ ಕೂಟ) ಸಂಸ್ಥೆ ವತಿಯಿಂದ ಜಿಲ್ಲೆಯ ಪೊಲೀಸ್ ಠಾಣೆಗಳು ಮತ್ತು ಗ್ರಾಮ ಪಂಚಾಯತ್ ಗಳಿಗೆ ಸ್ಯಾನಿಟೈಸರ್ ಮತ್ತು ಮಾಸ್ಕ್ ವಿತರಿಸಲಾಗುತ್ತಿದ್ದು, ಈಚೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಸ್ಯಾನಿಟೈಸರ್ ಮತ್ತು ಮಾಸ್ಕ್ ವಿತರಿಸುವ ಮೂಲಕ ಚಾಲನೆ ನೀಡಲಾಯಿತು.

ಕ್ರೆಡಿಟ್ ಆಕ್ಸಿಸ್ ಗ್ರಾಮೀಣ್ ಲಿಮಿಟೆಡ್ ಸಂಸ್ಥೆಯ ಡಿವಿಷನಲ್ ಮ್ಯಾನೇಜರ್ ಮಂಜುನಾಥ್ ಐ. ಎಂ. ಮತ್ತು ಸಿಬ್ಬಂದಿಗಳು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಅವರಿಗೆ ಹಸ್ತಾಂತರಿಸಿದರು.

ಕಳೆದ ವರ್ಷವೂ ಕೊರೊನಾ ವಾರಿಯರ್ ಗಳಾದ ಆಶಾ ಕಾರ್ಯಕರ್ತತೆಯರು, ಪೊಲೀಸ್ ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಮಾಧ್ಯಮ ಪ್ರತಿನಿಧಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಯಾನಿಟೈಸರ್ ಮತ್ತು ಮಾಸ್ಕ್ ಹಾಗೂ ಪೌರ ಕಾರ್ಮಿಕರಿಗೆ ಆಹಾರ ಕಿಟ್ ನೀಡಿದ್ದು, ಈ ವರ್ಷವೂ ನೀಡಿರುವುದಾಗಿ ಮಂಜುನಾಥ್ ತಿಳಿಸಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!