Monday, July 4, 2022
Home ಸಮಾಚಾರ ಮೇಲ್ಮನೆಯಲ್ಲಿ ಗೂಂಡಾಗಿರಿ: ಕಾಂಗ್ರೆಸ್ ಅಧಃಪತನಕ್ಕೆ ನಾಂದಿ

ಮೇಲ್ಮನೆಯಲ್ಲಿ ಗೂಂಡಾಗಿರಿ: ಕಾಂಗ್ರೆಸ್ ಅಧಃಪತನಕ್ಕೆ ನಾಂದಿ

ಉಡುಪಿ: ಗೂಂಡಾ ಸಂಸ್ಕೃತಿಗೆ ಹೆಸರುವಾಸಿಯಾಗಿರುವ ಕಾಂಗ್ರೆಸ್, ರಾಜ್ಯ ವಿಧಾನ ಪರಿಷತ್ ನಲ್ಲಿ ಗೌರವಾನ್ವಿತ ಉಪ ಸಭಾಪತಿಯವರನ್ನು ಪೀಠದಿಂದ ಎಳೆದಾಡಿದ ಫಟನೆ ನಾಗರಿಕ ಸಮಾಜ ತಲೆತಗ್ಗಿಸುವ ವಿಚಾರ. ಕಾಂಗ್ರೆಸ್ ನಾಯಕರ ವ್ಯಕ್ತಿತ್ವವನ್ನು ಬಿಂಬಿಸುವ ಇಂಥ ಅನಾಗರಿಕ ಗೂಂಡಾಗಿರಿ ವರ್ತನೆ ಕಾಂಗ್ರೆಸ್ ಅಧಃಪತನಕ್ಕೆ ನಾಂದಿ ಹಾಡಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಸಂವಿಧಾನ ಅಪಾಯದಲ್ಲಿದೆ ಎಂದು ಬೊಬ್ಬಿರಿಯುತ್ತಿದ್ದ ಕಾಂಗ್ರೆಸ್ ನಾಯಕರು ಸ್ವತಃ ಮೇಲ್ಮನೆ ಉಪ ಸಭಾಪತಿಯ ಸಾಂವಿಧಾನಿಕ ಹುದ್ದೆಗೆ ಅಪಮಾನ ಮಾಡಿದ್ದಾರೆ. ಕಾಂಗ್ರೆಸಿನ ವಿಧಾನ ಪರಿಷತ್ ಸದಸ್ಯರ ಇಂಥ ಕೀಳು ಮನಸ್ಥಿತಿಯ ಹೇಯ ವರ್ತನೆ ಸಹಿಸಲಸಾಧ್ಯ. ಸರಕಾರ ತಕ್ಷಣ ತಪ್ಪಿತಸ್ಥರ ಮೇಲೆ ಕಾನೂನು ರೀತಿಯ ಶಿಸ್ತು ಕ್ರಮ ಕೈಗೊಳ್ಳುವಂತೆ ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

ಸದಾ ದೇಶ ವಿರೋಧಿ ನೀತಿ ಮತ್ತು ಅಪಪ್ರಚಾರವನ್ನೇ ಬಂಡವಾಳವನ್ನಾಗಿಸಿರುವ ಕಾಂಗ್ರೆಸ್ ದಿನೇ ದಿನೇ ದೇಶಾದ್ಯಂತ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿರುವುದು ವಾಸ್ತವ. ದೇಶದ ಮುಂದೆ ರಾಜ್ಯದ ಮಾನ ಹರಾಜು ಹಾಕಿರುವ ಕಾಂಗ್ರೆಸ್ನ ಗೂಂಡಾಗಿರಿ ವರ್ತನೆಗೆ ರಾಜ್ಯದ ಜನತೆ ಮುಂಬರಲಿರುವ ಗ್ರಾಮ ಪಂಚಾಯತ್ ಸಹಿತ ಎಲ್ಲಾ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕುಯಿಲಾಡಿ ಭವಿಷ್ಯ ನುಡಿದಿದ್ದಾರ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!