ಉಡುಪಿ: ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಕರಂಬಳ್ಳಿ ಶ್ರೀ ವೇಂಕಟರಮಣ ದೇವಸ್ಥಾನಕ್ಕೆ ಶುಕ್ರವಾರ ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಜೆ. ಸಿ. ಮಾಧುಸ್ವಾಮಿ ಭೇಟಿ ನೀಡಿ ಪೂಜೆಯಲ್ಲಿ ಭಾಗವಹಿಸಿದರು.
ದೇವಸ್ಥಾನದ ಆಡಳಿತ ಮೊಕ್ತೇಸರ, ಶಾಸಕ ಕೆ. ರಘುಪತಿ ಭಟ್, ಸಚಿವರನ್ನು ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿ ಮೃತ್ಯುಂಜಯಸ್ವಾಮಿ, ಬಿಜೆಪಿ ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಅಂಚನ್, ನಗರಸಭಾ ಸದಸ್ಯ ಗಿರಿಧರ ಕರಂಬಳ್ಳಿ, ನಗರ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ರೋಶನ್ ಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರ ಸದಸ್ಯ ದಿನಕರ ಪೂಜಾರಿ ಮೊದಲಾದವರಿದ್ದರು