ಆತ್ಮೀಯ ಓದುಗರೇ,
ಕೋವಿಡ್ ಅನ್ ಲಾಕ್ ಹೇಳಿಲ್ಲ; ಹೇಳಿದ್ದು ಸರ್ಕಾರ. ಇನ್ನೂ ಸಂಪೂರ್ಣ ಕೊರೊನಾ ತೊಲಗಿಲ್ಲ. ಹಾಗಾಗಿ ಸ್ವಚ್ಛತೆ ಕಾಪಾಡಿ, ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಪಾಲಿಸಿ. ನೀವು ಸುರಕ್ಷಿತವಿರಿ, ಅನ್ಯರೂ ಸುರಕ್ಷಿತರಾಗಿರಲಿ. ಕೊರೊನಾದಿಂದ ರಕ್ಷಣೆ ನಮ್ಮ ಕೈಯ್ಯಲ್ಲೇ ಇದೆ. ಅಲ್ಲವೇ?
*****************************
(ಸುದ್ದಿಕಿರಣ ವರದಿ)
ನವದೆಹಲಿ, ಜು. 8: ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆಯಾಗಿ ಶೋಭಾ ಕರಂದ್ಲಾಜೆ ಗುರುವಾರ ದೆಹಲಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ನರೇಂದ್ರ ಸಿಂಗ್ ಥೋಮರ್, ಕೈಲಾಶ್ ಚೌಧರಿ, ಸಂಸದ ಸಿ. ಟಿ. ರವಿ ಹಾಗೂ ಇಲಾಖಾ ಅಧಿಕಾರಿಗಳು ಇದ್ದರು.
ರೈತ ಕುಟುಂಬದಿಂದ ಬಂದ ತನಗೆ ರೈತರ ಸಮಸ್ಯೆ ಬಗ್ಗೆ ಅರಿವಿದೆ. ರೈತ ಪೂರಕ ಯೋಜನೆ ಅರ್ಹರಿಗೆ ತಲುಪಿಸುವಲ್ಲಿ ಶ್ರಮಿಸುವುದಾಗಿ ತಿಳಿಸಿದರು.