Sunday, July 3, 2022
Home ಸಮಾಚಾರ ರಾಷ್ಟ್ರೀಯ ವಾರ್ತೆ ಯಡಿಯೂರಪ್ಪ ಕೊಡುಗೆ ಪದಗಳಲ್ಲಿ ವರ್ಣಿಸಲಾಗದು

ಯಡಿಯೂರಪ್ಪ ಕೊಡುಗೆ ಪದಗಳಲ್ಲಿ ವರ್ಣಿಸಲಾಗದು

ನವದೆಹಲಿ: ನಮ್ಮ ಪಕ್ಷ ಮತ್ತು ಕರ್ನಾಟಕದ ಬೆಳವಣಿಗೆಗೆ ಬಿ. ಎಸ್. ಯಡಿಯೂರಪ್ಪ ನೀಡಿರುವ ಕೊಡುಗೆಗಳನ್ನು ಪದಗಳಲ್ಲಿ ವರ್ಣಿಸಲಾಗುತ್ತಿಲ್ಲ. ಪದಗಳಲ್ಲಿ ವರ್ಣಿಸಿದರೆ ಅವರ ಕೊಡುಗೆಗೆ ನ್ಯಾಯ ಒದಗಿಸಿದಂತಾಗುವುದಿಲ್ಲ.

ಇದು ಪ್ರಧಾನಿ ನರೇಂದ್ರ ಮೋದಿ ಅವರು ಯಡಿಯೂರಪ್ಪ ಕುರಿತು ಆಡಿದ ಮಾತುಗಳು!

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸಿದ ಮೋದಿ, ಇದೇ ಸಂದರ್ಭದಲ್ಲಿ ಯಡಿಯೂರಪ್ಪ ಅವರನ್ನೂ ಟ್ವೀಟ್ ಮೂಲಕ ಪ್ರಶಂಸಿಸಿದ್ದಾರೆ.

ಕರ್ನಾಟಕದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳು. ಅವರು ತಮ್ಮ ಶ್ರೀಮಂತ ಶಾಸಕಾಂಗ ಮತ್ತು ಆಡಳಿತಾತ್ಮಕ ಅನುಭವವನ್ನು ತಮ್ಮೊಂದಿಗೆ ತರುತ್ತಾರೆ. ನಮ್ಮ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಮಾಡಿದ ಅಸಾಧಾರಣ ಕಾರ್ಯಗಳನ್ನು ಅವರು ಮುಂದುವರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಮೋದಿ ಹೇಳಿದ್ದಾರೆ.

ಇನ್ನೊಂದು ಟ್ವೀಟ್ ನಲ್ಲಿ ದಶಕಗಳ ಕಾಲ ಕಷ್ಟಪಟ್ಟು ದುಡಿದು, ಯಡಿಯೂರಪ್ಪ ಅವರು ಕರ್ನಾಟಕದ ಎಲ್ಲಾ ಭಾಗಗಳಲ್ಲಿ ಸಂಚರಿಸಿ ಜನರೊಂದಿಗೆ ಸ್ವರಮೇಳವನ್ನು ಮಾಡಿದರು. ಸಾಮಾಜಿಕ ಕಲ್ಯಾಣಕ್ಕಾಗಿ ಅವರ ಬದ್ಧತೆ ಎಲ್ಲರೂ ಮೆಚ್ಚುವಂಥದ್ದು’ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಹೊಗಳಿದ್ದಾರೆ.

 

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!