Monday, August 15, 2022
Home ಸಮಾಚಾರ ಜಿಲ್ಲಾ ಸುದ್ದಿ ಮೋಹನದಾಸ ಪೈ ಅಂತ್ಯಕ್ರಿಯೆ

ಮೋಹನದಾಸ ಪೈ ಅಂತ್ಯಕ್ರಿಯೆ

ಸುದ್ದಿಕಿರಣ ವರದಿ
ಸೋಮವಾರ, ಆಗಸ್ಟ್ 1

ಮೋಹನದಾಸ ಪೈ ಅಂತ್ಯಕ್ರಿಯೆ
ಉಡುಪಿ: ಮಣಿಪಾಲ ಉದ್ಯಮಿ, ಮಾಧ್ಯಮ ಮತ್ತು ಮುದ್ರಣ ಕ್ಷೇತ್ರದಲ್ಲಿ ಮಣಿಪಾಲಕ್ಕೆ ಕೀರ್ತಿ ತಂದಿದ್ದ ತೋನ್ಸೆ ಮೋಹನದಾಸ ಪೈ ಪಾರ್ಥೀವ ಶರೀರದ ಅಂತ್ಯಕ್ತಿಯೆ ಸೋಮವಾರ ಬೀಡಿನಗುಡ್ಡೆಯ ಹಿಂದೂ ರುದ್ರಭೂಮಿಯಲ್ಲಿ ನಡೆಯಿತು.

ಸಹೋದರರಾದ ನಾರಾಯಣ ಪೈ ಹಾಗೂ ಅಶೋಕ್ ಪೈ ನೇತೃತ್ವದಲ್ಲಿ ಅಂತಿಮ ವಿಧಿ ವಿಧಾನಗಳು ನಡೆದವು.

ಅದಕ್ಕೂ ಮುನ್ನ ಎಂಜಿಎಂ ಕಾಲೇಜು ನೂತನ ರವೀಂದ್ರ ಮಂಟಪದಲ್ಲಿ ಕಳೇಬರದ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮಣಿಪಾಲ ಸಂಸ್ಥೆಯ ಅಧೀನಕ್ಕೊಳಪಟ್ಟ ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರು ಅಂತಿಮ ದರ್ಶನ ಪಡೆದರು.

ಸಚಿವರಾದ ವಿ. ಸುನಿಲ್ ಕುಮಾರ್ ಮತ್ತು ಎಸ್. ಅಂಗಾರ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಶಾಸಕ ಯು. ಆರ್. ಸಭಾಪತಿ, ಜಿಲ್ಲಾಧಿಕಾರಿ ಕೂರ್ಮಾರಾವ್, ಉಡುಪಿ ಛೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಅಂಡಾರು ದೇವಿಪ್ರಸಾದ್ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ, ಮಣಿಪಾಲ ಮೀಡಿಯಾ ನೆಟ್ ವರ್ಕ್ ಕಾರ್ಯನಿರ್ವಾಹಕ ಅಧ್ಯಕ್ಷ ಟಿ. ಸತೀಶ್ ಪೈ, ತರಂಗ ವಾರಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಡಾ| ಸಂಧ್ಯಾ ಪೈ, ಮಣಿಪಾಲ್ ಟೆಕ್ನಾಲಜಿಸ್ ಕಾರ್ಯನಿರ್ವಾಹಕ ನಿರ್ದೇಶಕ ಗೌತಮ್ ಪೈ, ವನಿತಾ ಪೈ, ಮೋಹನ್ ದಾಸ್ ಪೈ ಸಹೋದರಿಯರಾದ ಡಾ. ಇಂದುಮತಿ ಪೈ ಮತ್ತು ಡಾ. ಆಶಾ ಪೈ, ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ರಿಜಿಸ್ಟ್ರಾರ್ ಡಾ. ರಂಜನ್ ಪೈ, ಮಾಹೆ ವಿ.ವಿ. ಸಹ ಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್, ಕುಲಪತಿ ಲೆ| ಡಾ. ಎಂ.ಡಿ. ವೆಂಕಟೇಶ್, ಮಣಿಪಾಲ್ ಮೀಡಿಯಾ ನೆಟ್ ವರ್ಕ್ ಲಿ. ನ ಸಿಇಒ ಮತ್ತು ಎಂಡಿ ವಿನೋದ್ ಕುಮಾರ್, ಎಂಜಿಎಂ ಕಾಲೇಜು ಪ್ರಾಂಶುಪಾಲ ಡಾ| ದೇವಿದಾಸ್ ನಾಯಕ್, ಅಂಕಣಕಾರ ಬಿ. ಭಾಸ್ಕರ ರಾವ್, ಎಂಐಟಿ ನಿರ್ದೇಶಕ ಡಾ| ಅನಿಲ್ ರಾಣಾ, ಶಾರದಾ ರೆಸಿಡೆನ್ಶಿಯಲ್ ಶಾಲೆಯ ಹಿರಿಯ ಅಧಿಕಾರಿ ವಿದ್ಯಾವಂತ ಆಚಾರ್ಯ, ವೈಕುಂಠ ಬಾಳಿಗ ಕಾನೂನು ಕಾಲೇಜಿನ ಪ್ರಾಂಶುಪಾಲೆ ಪ್ರೊ ನಿರ್ಮಲಾ ಕುಮಾರಿ, ಉದ್ಯಮಿಗಳಾದ ಜೆರ್ರಿ ವಿನ್ಸೆಂಟ್ ಡಯಾಸ್, ಜೇಸನ್ ಡಯಾಸ್, ಮನೋಹರ ಶೆಟ್ಟಿ, ಪುರುಷೋತ್ತಮ ಶೆಟ್ಟಿ, ಜಯಕರ ಶೆಟ್ಟಿ ಇಂದ್ರಾಳಿ, ಕೊಡವೂರು ದಿವಾಕರ ಶೆಟ್ಟಿ, ಸೋನಿಯಾ ಕ್ಲಿನಿಕ್ ನ ಡಾ. ಗೌರಿ ಸೇರಿದಂತೆ ಹಲವಾರು ಮಂದಿ ಗಣ್ಯರು ಅಂತಿಮ ದರ್ಶನದಲ್ಲಿ ಪಾಲ್ಗೊಂಡರು.

ಡಾ. ಟಿಎಂಎಪೈ ಪ್ರತಿಷ್ಠಾನ ಹಾಗೂ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಆಡಳಿತ ಮಂಡಳಿಯ ಅಧೀನದ ಶಿಕ್ಷಣ ಸಂಸ್ಥೆಗಳಿಗೆ ಸೋಮವಾರ ರಜೆ ಸಾರಲಾಗಿತ್ತು.

ಟಿ. ಮೋಹನದಾಸ ಪೈ ನಿಧನಕ್ಕೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!