Wednesday, July 6, 2022
Home ಸಮಾಚಾರ ಜಿಲ್ಲಾ ಸುದ್ದಿ ಕೃಷ್ಣಮಠದಲ್ಲಿ ಶರನ್ನವರಾತ್ರಿ ಉತ್ಸವ

ಕೃಷ್ಣಮಠದಲ್ಲಿ ಶರನ್ನವರಾತ್ರಿ ಉತ್ಸವ

ಕೃಷ್ಣಮಠದಲ್ಲಿ ನವರಾತ್ರಿ ಉತ್ಸವ
(ಸುದ್ದಿಕಿರಣ ವರದಿ)

ಉಡುಪಿ: ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಆಶಯದಂತೆ ಶ್ರೀಕೃಷ್ಣ ಮಠದಲ್ಲಿ ಶರನ್ನವರಾತ್ರಿ ಮಹೋತ್ಸವ ನಡೆಯಲಿದ್ದು, ಈ ಪರ್ವಕಾಲದಲ್ಲಿ ಧಾರ್ಮಿಕ ಉಪನ್ಯಾಸ ಮೂಲಕ ಭಗವದ್ಭಕ್ತರಿಗೆ ಸಂದೇಶ ನೀಡುವ ಸಲುವಾಗಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ.

ಅ. 7ರಿಂದ 14ರ ವರೆಗೆ ಪ್ರತಿದಿನ ಸಾಯಂಕಾಲ ದುರ್ಗಾ ನಮಸ್ಕಾರ ಪೂಜೆ ನಡೆಸಲಾಗುವುದು.

ಭಕ್ತಾದಿಗಳು ಸರಕಾರ ಸೂಚಿಸಿರುವ ಕೋವಿಡ್ ನಿಯಮ ಪಾಲಿಸಿಕೊಂಡು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮಠದ ವ್ಯವಸ್ಥಾಪಕ ಗೋವಿಂದರಾಜ್ ತಿಳಿಸಿದ್ದಾರೆ.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!