Saturday, August 13, 2022
Home ಸಮಾಚಾರ ರಾಜ್ಯ ವಾರ್ತೆ ಸಮುದ್ರ ಕೊರೆತ ತಡೆಗೆ ನೂತನ ತಂತ್ರಜ್ಞಾನ

ಸಮುದ್ರ ಕೊರೆತ ತಡೆಗೆ ನೂತನ ತಂತ್ರಜ್ಞಾನ

ಸುದ್ದಿಕಿರಣ ವರದಿ
ಬುಧವಾರ, ಜುಲೈ 13

ಸಮುದ್ರ ಕೊರೆತ ತಡೆಗೆ ನೂತನ ತಂತ್ರಜ್ಞಾನ
ಉಡುಪಿ: ಕರಾವಳಿ ಜಿಲ್ಲೆಗಳನ್ನು ಬಾಧಿಸುವ ಕಡಲ್ಕೊರೆತ ಸಮಸ್ಯೆಗೆ ನೂತನ ತಂತ್ರಜ್ಞಾನ ಅಳವಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಳೆ ಹಾನಿ ವೀಕ್ಷಣೆಗಾಗಿ ಆಗಮಿಸಿರುವ ಅವರು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ನಿನ್ನೆ‌ ಕೊಡಗು ಮತ್ತು ದ.ಕ. ಜಿಲ್ಲೆಗಳಿಗೆ ಭೇಟಿ ನೀಡಿ ಭೂಕಂಪನ ಮತ್ತು ಮಳೆಯಿಂದ ಹಾನಿಗೊಂಡ ಪ್ರದೇಶಗಳಿಗೆ ಭೇಟಿ ನೀಡಿದ್ದು, ಉಳ್ಳಾಲ ಕಡಲ್ಕೊರೆತ ಪ್ರದೇಶಗಳಿಗೂ ಭೇಟಿ ನೀಡಿದ್ದಾಗಿ ತಿಳಿಸಿದ ಅವರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿರುವ ಭೂಕುಸಿತ ಹಾಗೂ ಭೂಕಂಪನ ಕುರಿತು ಅಧ್ಯಯನ ಮಾಡಿ ವರದಿ ನೀಡಲು ನಾಲ್ಕು ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಮುಂದಿನ ವಾರದಲ್ಲಿ ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಭೇಟಿ ನೀಡುವುದಾಗಿ ತಿಳಿಸಿದರು.

ಉಡುಪಿ, ದ.ಕ. ಮತ್ತು ಉತ್ತರ ಕನ್ನಡ ಜಿಲ್ಲೆಗಳ ಅಧಿಕಾರಿಗಳ ಸಭೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿರುವುದಾಗಿ ತಿಳಿಸಿದರು.

ಉಡುಪಿ ಜಿಲ್ಲೆಯ ಕಡಲ್ಕೊರೆತ ಮತ್ತು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ತಿಳಿಸಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!