Sunday, October 2, 2022
Home ಸಮಾಚಾರ ರಾಷ್ಟ್ರೀಯ ವಾರ್ತೆ ಸಿಎಂ ಬೊಮ್ಮಾಯಿ ಬದಲಿಸುವ ಪ್ರಶ್ನೆಯೇ ಇಲ್ಲ

ಸಿಎಂ ಬೊಮ್ಮಾಯಿ ಬದಲಿಸುವ ಪ್ರಶ್ನೆಯೇ ಇಲ್ಲ

ಸುದ್ದಿಕಿರಣ ವರದಿ
ಶುಕ್ರವಾರ, ಆಗಸ್ಟ್ 12

ಸಿಎಂ ಬೊಮ್ಮಾಯಿ ಬದಲಿಸುವ ಪ್ರಶ್ನೆಯೇ ಇಲ್ಲ
ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅತ್ಯುತ್ತಮವಾಗಿ ಆಡಳಿತ ನೀಡುತ್ತಿದ್ದು, ಅವರನ್ನು ಯಾವುದೇ ಕಾರಣಕ್ಕೂ ಸಿಎಂ ಸ್ಥಾನದಿಂದ ಬದಲಾಯಿಸುವ ಉದ್ದೇಶ ಇಲ್ಲ ಎಂದು ಹೇಳುವ ಮೂಲಕ ಸಿಎಂ ಬದಲಾವಣೆ ವಿಚಾರದ ಚರ್ಚೆಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇತಿಶ್ರೀ ಹಾಡಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ವಿಚಾರ ಕಾಂಗ್ರೆಸ್ ಪಕ್ಷದ ಪಿತ್ತೂರಿ ಹಾಗೂ ಷಡ್ಯಂತ್ರ. ಮುಂದಿನ ವಿಧಾನಸಭೆ ಚುನಾವಣೆಯನ್ನು ನಾವು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದವರು ಸುದ್ದಿಗಾರರರಿಗೆ ಸ್ಪಷ್ಟಪಡಿಸಿದರು.

ಆ ಮೂಲಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಊಹಾಪೋಹಕ್ಕೆ ತೆರೆ ಎಳೆದರು.

ಬೊಮ್ಮಾಯಿ ರೈತರು, ಯುವಕರ ಪರ ಕೆಲಸ ಮಾಡುತ್ತಿದ್ದಾರೆ. ಕಾಮನ್ ಮ್ಯಾನ್ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರನ್ನು ಬದಲಿಸುವ ಪ್ರಶ್ನೆ ಇಲ್ಲ ಎಂದು ಅರುಣ್ ಸಿಂಗ್ ಹೇಳಿದರು.

ಮುಂದಿನ ಚುನಾವಣೆ 100 ಶೇ. ಬೊಮ್ಮಾಯಿ ನೇತೃತ್ವದಲ್ಲೇ ಎದುರಿಸಲಿದ್ದೇವೆ ಹಾಗೂ ಪೂರ್ಣ ಪ್ರಮಾಣದ ಬಹುಮತದಲ್ಲಿ ಅಧಿಕಾರದಲ್ಲಿ ಬರಲಿದ್ದೇವೆ ಎಂದು ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು.

ಸಿಎಂ ಬದಲಾವಣೆ ಎನ್ನುವುದು ಕಾಂಗ್ರೆಸ್ ಪಕ್ಷದ ಷಡ್ಯಂತ್ರ. ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆಯೇ ಒಡಕಿದೆ. ಅದನ್ನು ಮುಚ್ಚಿ ಹಾಕಲು ಸಿಎಂ ಬದಲಾವಣೆ ವಿಚಾರ ಹುಟ್ಟುಹಾಕಿದ್ದಾರೆ. ಕಾಂಗ್ರೆಸ್ ನಾಯಕರೇ ಇಲ್ಲದ ಪಕ್ಷ. ಅವರು ಹುಟ್ಟುಹಾಕಿದ ಸಿಎಂ ಬದಲಾವಣೆ ವಿಚಾರದಲ್ಲಿ ಯಾವುದೇ ಸತ್ಯ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!