ಸುದ್ದಿಕಿರಣ ವರದಿ
ಗುರುವಾರ, ಜುಲೈ 21
ಡಿಸೇಲ್ ಸರಬರಾಜು: ಅಡೆತಡೆ ಆಗದಂತೆ ಕ್ರಮ
ಮಲ್ಪೆ: ಮುಂದಿನ ಮೀನುಗಾರಿಕೆ ಋತು ಆರಂಭದಲ್ಲಿ ಮೀನುಗಾರಿಕೆಗೆ ನೀಡಲಾಗುತ್ತಿರುವ ಡಿಸೇಲ್ ಸರಬರಾಜಿನಲ್ಲಿ ಯಾವುದೇ ಅಡೆತಡೆಗಳು ಆಗದಂತೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹಾರ್ದಿಪ್ ಸಿಂಗ್ ಪುರಿ ಅವರು ಕರ್ನಾಟಕ ಕರಾವಳಿ ಮೀನುಗಾರ ಕ್ರಿಯಾ ಸಮಿತಿಯ ನಿಯೋಗಕ್ಕೆ ಭರವಸೆ ನೀಡಿದ್ದಾರೆ.
ಗುರುವಾರ ರಾಜ್ಯ ಕೃಷಿ ಸಚಿವೆ, ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಮೀನುಗಾರರ ನಿಯೋಗ ಕೇಂದ್ರ ಪೆಟ್ರೋಲಿಯಂ ಸಚಿವರನ್ನು ದೆಹಲಿಯಲ್ಲಿ ಭೇಟಿಯಾಗಿ ಮೀನುಗಾರರು ಎದುರಿಸುತ್ತಿರುವ ಸಮಸ್ಯೆ ಮತ್ತು ಕನ್ಸ್ಯೂಮರ್ ಹಾಗೂ ರಿಟೇಲ್ ಡಿಸೇಲ್ ದರದ ವ್ಯತ್ಯಾಸದ ಬಗ್ಗೆ ಚರ್ಚಿಸಿ ಬಂಕ್ ಗಳ ವಿತರಣೆಯಲ್ಲಿ ಆಗುತ್ತಿರುವ ಸಮಸ್ಯೆ ಪರಿಹರಿಸುವ ಬಗ್ಗೆ ಕೂಲಂಕಶವಾಗಿ ಚರ್ಚಿಸಿ, ಮೀನುಗಾರರಿಗೆ ಅನುಕೂಲವಾಗುವಂತೆ ಆದೇಶ ಹೊರಡಿಸಬೇಕು ಎಂದು ಮೀನುಗಾರರ ನಿಯೋಗ ಮನವಿ ಸಲ್ಲಿಸಿತು.
ನಿಯೋಗದಲ್ಲಿ ದ.ಕ. ಮೀನು ಮಾರಾಟ ಫೆಡರೇಶನ್ ನ ಅಧ್ಯಕ್ಷ ಯಶಪಾಲ್ ಸುವರ್ಣ, ಕರ್ನಾಟಕ ಕರಾವಳಿ ಮೀನುಗಾರ ಕ್ರಿಯಾ ಸಮಿತಿ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಉಪಾಧ್ಯಕ್ಷ ರಾಮಚಂದ್ರ ಕುಂದರ್, ಪ್ರಧಾನ ಕಾರ್ಯದರ್ಶಿ ಕಿಶೋರ್ ಡಿ. ಸುವರ್ಣ, ಕೋಶಾಧಿಕಾರಿ ಸೋಮನಾಥ ಕಾಂಚನ್, ಸಲಹೆಗಾರ ಸತೀಶ್ ಕುಂದರ್ ಮಲ್ಪೆ ಮೊದಲಾದವರಿದ್ದರು.