Saturday, July 2, 2022
Home ಸಮಾಚಾರ ಜಿಲ್ಲಾ ಸುದ್ದಿ ಸಾಲ ಮರುಪಾವತಿಗೆ ಒತ್ತಡ ಹೇರುವಂತಿಲ್ಲ

ಸಾಲ ಮರುಪಾವತಿಗೆ ಒತ್ತಡ ಹೇರುವಂತಿಲ್ಲ

ಉಡುಪಿ: ಕೋವಿಡ್ ತಡೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆವಶ್ಯಕ ಚಟುವಟಿಕೆ ಹೊರತುಪಡಿಸಿ ಇತರ ಉದ್ದೇಶಗಳಿಗಾಗಿ ಸಾರ್ವಜನಿಕ ಸಂಚಾರ ನಿರ್ಬಂಧಿಸಲಾಗಿದೆ.

ಈ ಸಂದರ್ಭದಲ್ಲಿ ಯಾವುದೇ ಮೈಕ್ರೋಫೈನಾನ್ಸ್ ಗಳು ಅಥವಾ ಸಹಕಾರಿ ಸಂಘಗಳು ಅಥವಾ ಇತರ ಹಣಕಾಸು ಸಂಸ್ಥೆಗಳ ಸಾಲ ವಸೂಲಾತಿದಾರರು, ಮನೆ ಮನೆ ಭೇಟಿ ನೀಡುವುದನ್ನು ಜೂ. 6ರ ವರೆಗೆ ನಿರ್ಬಂಧಿಸಲಾಗಿದೆ.
ಯಾವುದೇ ಯಾವುದೇ ಹಣಕಾಸು ಸಂಸ್ಥೆಗಳು ಸಾಲಗಾರರಿಗೆ ಸಾಲ ಮರುಪಾವತಿ ಮಾಡಲು ಒತ್ತಡ ಹೇರುವಂತಿಲ್ಲ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ ತಿಳಿಸಿದ್ದಾರೆ.

ಸಾಲ ಮರುಪಾವತಿ ಮಾಡಲು ಒತ್ತಡ ಹೇರಿದ್ದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಸೂಕ್ತ ಕ್ರಮ ಕೈಗೊಳ್ಳಲು ನೋಡೆಲ್ ಅಧಿಕಾರಿಗಳನ್ನಾಗಿ ಜಿಲ್ಲಾ ಲೀಡ್ ಬ್ಯಾಂಕ್ ಪ್ರಬಂಧಕ ರುದ್ರೇಶ್ 9449860858 ಹಾಗೂ ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ಬಿ. ನಾಯಕ್ 9448633338 ಅವರನ್ನು ನೇಮಿಸಲಾಗಿದೆ.

ಸಾಲ ನೀಡಿಕೆ ಸಂಸ್ಥೆಗಳು ಸಾಲಗಾರರಿಗೆ ಕಿರುಕುಳ ನೀಡಿದಲ್ಲಿ ನೋಡೆಲ್ ಅಧಿಕಾರಿಗಳನ್ನು ಸಂಪರ್ಕಿಸಲು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!