Thursday, July 7, 2022
Home ಸಮಾಚಾರ ಜಿಲ್ಲಾ ಸುದ್ದಿ ಪ್ರಮೋದ್ ಬಿಜೆಪಿ ಸೇರ್ಪಡೆ ಮಾಹಿತಿ ಇಲ್ಲ: ಕುಯಿಲಾಡಿ

ಪ್ರಮೋದ್ ಬಿಜೆಪಿ ಸೇರ್ಪಡೆ ಮಾಹಿತಿ ಇಲ್ಲ: ಕುಯಿಲಾಡಿ

ಸುದ್ದಿಕಿರಣ ವರದಿ
ಸೋಮವಾರ, ಫೆಬ್ರವರಿ 21

ಪ್ರಮೋದ್ ಬಿಜೆಪಿ ಸೇರ್ಪಡೆ ಮಾಹಿತಿ ಇಲ್ಲ: ಕುಯಿಲಾಡಿ
ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆಯ ವದಂತಿ ಇದ್ದು, ಈ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿಗೆ ಯಾವುದೇ ರೀತಿಯ ಮಾಹಿತಿ ಬಂದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ನಮ್ಮ ಪಕ್ಷದಲ್ಲಿ ಸದ್ಯಕ್ಕೆ ಯಾವುದೇ ಗೇಟ್ ಓಪನ್ ಇಲ್ಲ. ಪ್ರಮೋದ್ ಮಧ್ವರಾಜ್ ಪಕ್ಷಾಂತರ ಮಾಡುವುದರಲ್ಲಿ ನಿಪುಣರು. ಜೆಡಿಎಸ್ ಗೆ ಪಕ್ಷಾಂತರಗೊಂಡು ಇದೀಗ ಕಾಂಗ್ರೆಸ್ ನಲ್ಲಿ ಇದ್ದೂ ಇಲ್ಲದಂತೆ ಇದ್ದಾರೆ.

ಅವರ ಸ್ವಂತ ರಾಜಕೀಯ ನೆಲೆ ಕಂಡುಕೊಳ್ಳುವ ಉದ್ದೇಶದಿಂದ ಬಿಜೆಪಿಗೆ ಬರುವುದಾದರೆ ಜಿಲ್ಲಾ ಬಿಜೆಪಿಯ ಸಹಮತವಿಲ್ಲ. ಈ ಬಗ್ಗೆ ರಾಜ್ಯ ಬಿಜೆಪಿ ಸೂಕ್ತ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ.

ಅವರು ಕಾಲ ಕಾಲಕ್ಕೆ ತನ್ನ ರಾಜಕೀಯ ಲಾಭಕ್ಕಾಗಿ ಬಿಜೆಪಿ ಹೆಸರನ್ನು ಬಳಸಿಕೊಳ್ಳುವುದು ತರವಲ್ಲ ಎಂದು ಕುಯಿಲಾಡಿ ತಿಳಿಸಿದ್ದಾರೆ.

 

 

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!