Saturday, July 2, 2022
Home ಸಮಾಚಾರ ಜಿಲ್ಲಾ ಸುದ್ದಿ ಮಂತ್ರಿಗಿರಿಗಾಗಿ ಕಾಲಿಗೆ ಬೀಳೋ ಹೆಡ್ಡ ರಾಜಕಾರಣಿ ನಾನಲ್ಲ

ಮಂತ್ರಿಗಿರಿಗಾಗಿ ಕಾಲಿಗೆ ಬೀಳೋ ಹೆಡ್ಡ ರಾಜಕಾರಣಿ ನಾನಲ್ಲ

ಕುಂದಾಪುರ: ನನಗೆ ಸಚಿವ ಸ್ಥಾನ ಕೊಡಿ ಎಂದು ನಾನು ಯಾವತ್ತೂ ನಾಯಕರ ಮುಂದೆ ಬೇಡಿಕೆ ಇಟ್ಟವನಲ್ಲ ಎಂದು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನ ಕೇಳಿ ಪಡೆಯುವುದು ಪ್ರಜಾಪ್ರಭುತ್ವ ವ್ಯವಸ್ಥೆಯೂ ಅಲ್ಲ. ಹಿಂದೆ ಸಚಿವ ಸ್ಥಾನ ಕೊಡುತ್ತೇನೆಂದು ನನ್ನನ್ನು ಕರೆದು ತಪ್ಪು ಮಾಡಿದ್ದರು. ಆದರೆ, ನಾನು ಹೆಡ್ಡ ರಾಜಕಾರಣಿ ಅಲ್ಲ. ಸಚಿವ ಸ್ಥಾನಕ್ಕಾಗಿ ಯಾರ ಕಾಲಿಗೂ ಬೀಳೋದಿಲ್ಲ. ರಾಜಕೀಯದಲ್ಲಿ ಸಮತೋಲನ ಕಳೆದುಕೊಳ್ಳಲು ನನಗೆ ಇಷ್ಟವಿಲ್ಲ. ನಾನು ಸಚಿವ ಸ್ಥಾನವನ್ನು ಯಾರ ಬಳಿಯೂ ಕೇಳಲು ಹೋಗುವುದಿಲ್ಲ. ನನ್ನ ಶ್ವಾಸ ಇದ್ದಷ್ಟು ಕಾಲ ಬೆಂಗಳೂರಿಗೆ ಸಚಿವ ಸ್ಥಾನ ಕೇಳಲು ಹೋಗುವುದಿಲ್ಲ. ಯಾವ ನಾಯಕನ ಹಿಂದೆ ಸುತ್ತು ಬರುತ್ತಾ ತಿರುಗಾಡಲು ಹೋಗುವುದಿಲ್ಲ. ನನ್ನ ರಾಜಕೀಯ ಜೀವನದಲ್ಲಿ ಇದುವರೆಗೂ ಸ್ವಾಭಿಮಾನ ಬಿಟ್ಟಿಲ್ಲ ಎಂದರು.

ಮಂತ್ರಿಯಾದರೆ ಕಾರು, ಎಸ್ಕಾರ್ಟ್ ಬೇಡ
ನಾನು ರಾಜಕೀಯ ಲಾಬಿ ಜಾತಿವಾದಿತನ ಮಾಡುವುದಿಲ್ಲ. ಯಾರ ಕಾಲಿಗೆ ಬಿದ್ದು ಕೆಲಸ ತೆಗೆದುಕೊಳ್ಳುವುದಿಲ್ಲ. ಕೆಲಸ ಕೊಟ್ಟರೆ ನಾನು ಅದನ್ನು ನಿಭಾಯಿಸುತ್ತೇನೆ. ಒಂದುವೇಳೆ ನಾನು ಮಂತ್ರಿಯಾದರೆ ಸರಕಾರಿ ಕಾರು, ಎಸ್ಕಾರ್ಟ್, ಗನ್ ಮ್ಯಾನ್ ತೆಗೆದುಕೊಳ್ಳುವುದಿಲ್ಲ.

ಸಚಿವ ಸ್ಥಾನ ಕೊಡುವ ಬಗ್ಗೆ ನನಗೆ ಈವರೆಗೆ ಯಾವುದೇ ಕರೆ ಬಂದಿಲ್ಲ. ಕರೆ ಬಂದರೆ ನಾನು ಇದನ್ನು ಹೇಳಲು ಸಿದ್ಧ ಇದ್ದೇನೆ. ನನ್ನದು ನೇರ ನುಡಿಯ ರಾಜಕಾರಣ. ಹಾಗಂತ ಇದು ದುರಹಂಕಾರದ ಮಾತಲ್ಲ, ನಾನು ಯಾರ ಭಯದಲ್ಲೂ ಇಲ್ಲ. ಮತದಾರರು ಮತ್ತು ಕಾರ್ಯಕರ್ತರ ಋಣದಲ್ಲಿ ನಾನಿದ್ದೇನೆ ಎಂದಿದ್ದಾರೆ.

ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸತತ ಐದು ಭಾರಿ ಗೆದ್ದಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಈ ಬಾರಿಯಾದರೂ ಸಚಿವ ಸ್ಥಾನ ಸಿಗಬೇಕೆನ್ನುವುದು ಕ್ಷೇತ್ರದ ಜನರು ಹಾಗೂ ಅವರ ಅಭಿಮಾನಿಗಳ ಬೇಡಿಕೆ.

ಈ ಬಗ್ಗೆ ಹಾಲಾಡಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!