Thursday, July 7, 2022
Home ಸಮಾಚಾರ ರಾಜ್ಯ ವಾರ್ತೆ ಮೇಕೆದಾಟು ಯೋಜನೆಗೆ ತಡೆಯಾಜ್ಞೆ ಇಲ್ಲ

ಮೇಕೆದಾಟು ಯೋಜನೆಗೆ ತಡೆಯಾಜ್ಞೆ ಇಲ್ಲ

ಸುದ್ದಿಕಿರಣ ವರದಿ
ಗುರುವಾರ, ಜೂನ್ 16

ಮೇಕೆದಾಟು ಯೋಜನೆಗೆ ತಡೆಯಾಜ್ಞೆ ಇಲ್ಲ

ದಾವಣಗೆರೆ: ಮೇಕೆದಾಟು ಯೋಜನೆಗೆ ನ್ಯಾಯಾಲಯದಲ್ಲಿ ಯಾವುದೇ ತಡೆಯಾಜ್ಞೆ ಇಲ್ಲ. ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ತನ್ನ ವಾದ ಮಂಡಿಸಿದ್ದು ಡಿಪಿಆರ್ ಅನುಮೋದನೆಯಾಗುವ ವಿಶ್ವಾಸ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾವೇರಿ ನದಿ ನೀರು ಪ್ರಾಧಿಕಾರಕ್ಕೆ ವಿಷಯ ಈಗಾಗಲೇ ಶಿಫಾರಸು ಆಗಿ 15 ಸಭೆಗಳಾಗಿವೆ. ಪ್ರಾಧಿಕಾರಕ್ಕಿರುವ ಅಧಿಕಾರದ ವ್ಯಾಪ್ತಿಯಲ್ಲಿ ಮುಂದಿನ ವಾರ ಸಭೆ ಕರೆಯುವ ಸಾಧ್ಯತೆ ಇದೆ. ತಮಿಳುನಾಡು ಸರ್ಕಾರ ಹೇಳುವುದರಲ್ಲಿ ಯಾವುದೇ ಕಾನೂನು ಇಲ್ಲ, ಅರ್ಥವೂ ಇಲ್ಲ ಎಂದರು.

ವರದಿಯ ಆಧಾರದಲ್ಲಿ ಕ್ರಮ
ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಕ್ರಿಯೆ ನಡೆಯುತ್ತಿದೆ.

ಮೊದಲನೇ ಹಂತದಲ್ಲಿ ಭಕ್ತವತ್ಸಲಂ ಸಮಿತಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮೀಸಲಾತಿ ಪ್ರಕ್ರಿಯೆ ನಡೆಸಿದ್ದು, ಅದಾದ ಕೂಡಲೇ ರಾಜ್ಯದ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗೆ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!