Saturday, July 2, 2022
Home ಸಮಾಚಾರ ರಾಷ್ಟ್ರೀಯ ವಾರ್ತೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ

ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ

ನವದೆಹಲಿ: `ಮುಖ್ಯಮಂತ್ರಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡಲಿದ್ದೇನೆ ಎಂಬ ಸುದ್ದಿಯಲ್ಲಿ ಸತ್ಯಾಂಶ ಇಲ್ಲ. ರಾಜೀನಾಮೆ ನೀಡುವುದೂ ಇಲ್ಲ’ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಶನಿವಾರ ಬೆಳಿಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಭೇಟಿಗೆ ಆಗಮಿಸಿದ ಸಂದರ್ಭ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

`ನಾನು ಪ್ರಧಾನಿಯೊಂದಿಗೆ ರಾಜ್ಯದ ಅಭಿವೃದ್ಧಿ ಹಾಗೂ ಮೇಕೆದಾಟು ಯೋಜನೆ ಬಗ್ಗೆ ಮಾತುಕತೆ ನಡೆಸಿದ್ದೇನೆ. ಪಕ್ಷದ ವರಿಷ್ಠರಾದ ಅಮಿತ್ ಶಾ, ನಡ್ಡಾ, ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದೇನೆ’ ಎಂದವರು ಹೇಳಿದರು.

`ಆಗಸ್ಟ್ ಮೊದಲ ವಾರ ಮತ್ತೆ ದೆಹಲಿಗೆ ಬಂದು ವರಿಷ್ಠರನ್ನು ಭೇಟಿ ಮಾಡುವೆ’ ಎಂದವರು ಹೇಳಿದರು

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!