Monday, August 15, 2022
Home ಸಮಾಚಾರ ಜಿಲ್ಲಾ ಸುದ್ದಿ ದ.ಕ. ಜಿಲ್ಲೆಯಲ್ಲಿ ಆಗಸ್ಟ್ 5ರಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ

ದ.ಕ. ಜಿಲ್ಲೆಯಲ್ಲಿ ಆಗಸ್ಟ್ 5ರಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ

ಸುದ್ದಿಕಿರಣ ವರದಿ
ಗುರುವಾರ, ಆಗಸ್ಟ್ 4

ದ.ಕ. ಜಿಲ್ಲೆಯಲ್ಲಿ ಆಗಸ್ಟ್ 5ರಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ (ಆಗಸ್ಟ್ 5)ಯಿಂದ ಮುಂದಿನ ಒಂದು ವಾರ ಕಾಲ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ಈ ನಿಯಮ ಅನ್ವಯವಾಗಲಿದೆ. 18 ವರ್ಷದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ ವಿನಾಯಿತಿ ನೀಡಲಾಗಿದೆ. ಪುರುಷ ಹಿಂಬದಿ ಸವಾರರಿಗೆ ಈ ನಿಯಮ ಅನ್ವಯವಾಗಲಿದೆ ಎಂದವರು ಸ್ಪಷ್ಟಪಡಿಸಿದರು.

ಕೆಲವು ಬಾರಿ ಹಿಂಬದಿ ಸವಾರರು ಸಮಸ್ಯೆ ಮಾಡುತ್ತಾರೆ. ಒಂದು ವಾರ ಈ ನಿಯಮ ಜಿಲ್ಲೆಯಲ್ಲಿ ಅನುಷ್ಠಾನ ಮಾಡಲಾಗುತ್ತದೆ.

ಬೇರೆ ರಾಜ್ಯಗಳಲ್ಲೂ ಈ ನಿಯಮ ಜಾರಿ ಮಾಡಲಾಗಿತ್ತು. ಆಗ ಎಲ್ಲಾ ಪುರುಷ ಸವಾರರಿಗೆ ಇಬ್ಬಿಬ್ಬರು ಸಂಚರಿಸಲು ಅವಕಾಶ ನೀಡಿರಲಿಲ್ಲ.

ಆದರೆ ಇಲ್ಲಿ ಮಹಿಳೆಯರು, ಹಿರಿಯ ನಾಗರಿಕರು, ಮಕ್ಕಳಿಗೆ ರಿಯಾಯಿತಿ ನೀಡಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!