Monday, August 15, 2022
Home ಸಮಾಚಾರ ರಾಜ್ಯ ವಾರ್ತೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಇಲ್ಲ

ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಇಲ್ಲ

ಸುದ್ದಿಕಿರಣ ವರದಿ
ಭಾನುವಾರ, ಜುಲೈ 17

ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಇಲ್ಲ
ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯೇ ನನ್ನ ಕೊನೆಯ ಚುನಾವಣೆ. ಆ ಚುನಾವಣೆಯಲ್ಲಿ ಮಾತ್ರ ಸ್ಪರ್ಧಿಸುತ್ತೇನೆ. ಆ ಬಳಿಕ ಸಕ್ರಿಯ ರಾಜಕಾರಣದಿಂದ ದೂರ ಉಳಿಯಲಿದ್ದೇನೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಪ್ರಕಟಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ. ಎಲ್ಲಿ ಸ್ಪರ್ಧಿಸಬೇಕು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ. ಚಾಮುಂಡೇಶ್ವರಿ ಕ್ಷೇತ್ರ ನನ್ನನ್ನು ಸೋಲಿಸಿದೆ ಮತ್ತು ಗೆಲ್ಲಿಸಿಯೂ ಇದೆ. ಸೋಲು- ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸುತ್ತೇನೆ ಎಂದರು.

ಕೋಲಾರ, ಹುಣಸೂರು, ವರುಣಾ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಮನವಿ ಬರುತ್ತಿದೆ ಎಂದು ಸಿದ್ಧರಾಮಯ್ಯ ಹೇಳಿದರು.

2023ರ ಚುನಾವಣೆ ಬಳಿಕ ಯಾವುದೇ ಹುದ್ದೆ ಕೊಟ್ಟರೂ ನಾನು ಸ್ವೀಕರಿಸುವುದಿಲ್ಲ. ರಾಜ್ಯಸಭೆ ಸೇರಿ ಯಾವುದೇ ಸದಸ್ಯತ್ವ ನೀಡಿದರೂ ಸ್ವೀಕರಿಸುವುದಿಲ್ಲ ಎಂದು ಘೋಷಿಸಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!