ಉಡುಪಿ: ಜಿಲ್ಲೆಯಲ್ಲಿ ಶೀಘ್ರ ಖಾಸಗಿ ಸಹಭಾಗಿತ್ವದ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಲು ನಿರ್ಧರಿಸಿದ್ದು, ಅದಕ್ಕೆ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ.
ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ತಮ್ಮ ಸಂಘಟನೆ ಅಹರ್ನಿಶಿ ಹೋರಾಟ, ಆಗ್ರಹ ನಡೆಸಿತ್ತು. ಆ ಪರಿಣಾಮ ಈಚೆಗೆ ಜಿಲ್ಲೆಗಾಗಮಿಸಿದ್ದ ವೈದ್ಯಕೀಯ ಸಚಿವ ಡಾ. ಸುಧಾಕರ್, ಜಿಲ್ಲೆಯಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವುದಾಗಿ ಹೇಳಿದ್ದರು.
ಆದರೆ, ಜಿಲ್ಲೆಯ ಜನರ ಬೇಡಿಕೆಯಂತೆ ಪರಿಪೂರ್ಣವಾದ ಸರ್ಕಾರಿ ವೈದ್ಯಕೀಯ ಕಾಲೇಜನ್ನೇ ಸ್ಥಾಪಿಸಲು ಆಗ್ರಹಿಸುತ್ತಿರುವುದಾಗಿ ಕ್ಯಾಂಪಸ್ ಫ್ರಂಟ್ ಜಿಲ್ಲಾಧ್ಯಕ್ಷ ಆಸೀಲ್ ತಿಳಿಸಿದ್ದಾರೆ. ನಮ್ಮ ಬೇಡಿಕೆ ಈಡೇರುವ ವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದೂ ಅವರು ತಿಳಿಸಿದ್ದಾರೆ