ಮಂಗಳೂರು: ಪ್ರಜ್ಞಾಹೀನ ಸ್ಥಿತಿಯಲ್ಲಿ ಕಳೆದ ಎಂಟು ದಿನದಿಂದ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಮೆದುಳಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.
ಡಾ. ಸುನಿಲ್ ಶೆಟ್ಟಿ ಮತ್ತು ಡಾ. ದಿವಾಕರ್ ತಂಡ ಶಸ್ತ್ರ ಚಿಕಿತ್ಸೆ ನಡೆಸಿದೆ.
ಆಸ್ಕರ್ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಹೆಪ್ಪುಗಟ್ಟಿದ್ದ ರಕ್ತ ತೆಗೆದು, ಯಶಸ್ವಿಯಾಗಿ ಶಸ್ತ್ರಕ್ರಿಯೆ ಮಾಡಲಾಗಿದೆ.
ಪತ್ನಿ ಬ್ಲೋಸಂ ಫೆರ್ನಾಂಡಿಸ್ ಮತ್ತು ಮಕ್ಕಳು ಹಾಗೂ ಮಾಜಿ ಸಚಿವರಾದ ರಮಾನಾಥ ರೈ ಮತ್ತು ವಿನಯಕುಮಾರ್ ಸೊರಕೆ, ವಿಧಾನ ಪರಿಷತ್ ಮಾಜಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ, ಕಾಂಗ್ರೆಸ್ ಪ್ರಮುಖರಾದ ದಿನೇಶ್ ಪುತ್ರನ್, ನರಸಿಂಹಮೂರ್ತಿ, ನಾಗೇಶ್ ಕುಮಾರ್ ಉದ್ಯಾವರ ಮೊದಲಾದವರಿದ್ದರು.