Monday, August 15, 2022
Home ಸಮಾಚಾರ ರಾಷ್ಟ್ರೀಯ ವಾರ್ತೆ ರಾಜ್ಯಸಭಾ ಸದಸ್ಯೆಯಾಗಿ ಪಿ.ಟಿ. ಉಷಾ ಪ್ರಮಾಣವಚನ ಸ್ವೀಕಾರ

ರಾಜ್ಯಸಭಾ ಸದಸ್ಯೆಯಾಗಿ ಪಿ.ಟಿ. ಉಷಾ ಪ್ರಮಾಣವಚನ ಸ್ವೀಕಾರ

ಸುದ್ದಿಕಿರಣ ವರದಿ
ಬುಧವಾರ, ಜುಲೈ 20

ರಾಜ್ಯಸಭಾ ಸದಸ್ಯೆಯಾಗಿ ಪಿ.ಟಿ. ಉಷಾ ಪ್ರಮಾಣವಚನ ಸ್ವೀಕಾರ
ನವದೆಹಲಿ: ರಾಜ್ಯಸಭಾ ಸದಸ್ಯೆಯಾಗಿ ಭಾರತದ ಪ್ರಖ್ಯಾತ ಕ್ರೀಡಾಪಟು ಪಿ.ಟಿ. ಉಷಾ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಹಳ್ಳಿಯಲ್ಲಿ ಜನಿಸಿದ ಉಷಾ, ಕ್ರೀಡಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

ವಿಶ್ವ ಜೂನಿಯರ್ ಇನ್ವಿಟೇಶನಲ್ ಮೀಟ್, ಏಷ್ಯನ್ ಚಾಂಪಿಯನ್ಶಿಪ್ ಗಳು ಮತ್ತು ಏಷ್ಯನ್ ಗೇಮ್ಸ್ ಸೇರಿದಂತೆ ವಿವಿಧ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತವನ್ನು ಪ್ರತಿನಿಧಿಸಿ ಪದಕಗಳನ್ನು ಗೆದ್ದಿರುವ ಅವರು ಪಯ್ಯೋಲಿ ಎಕ್ಸ್ ಪ್ರೆಸ್ ಎಂದೇ ಖ್ಯಾತರು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ, ಖ್ಯಾತ ಸಂಗೀತ ಸಂಯೋಜಕ ಇಳಯರಾಜ, ಚಿತ್ರ ಕಥೆಗಾರ ವಿ. ವಿಜಯೇಂದ್ರ ಪ್ರಸಾದ್ ಜೊತೆ ಉಷಾ ಮೇಲ್ಮನೆಗೆ ನಾಮ ನಿರ್ದೇಶನಗೊಂಡಿದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!