Sunday, July 3, 2022
Home ಸಮಾಚಾರ ಜಿಲ್ಲಾ ಸುದ್ದಿ `ರಾಜಕೀಯ ಹಿನ್ನೆಲೆ ಇಲ್ಲದ ತನ್ನನ್ನು ಪಕ್ಷ ಗುರುತಿಸಿದೆ'

`ರಾಜಕೀಯ ಹಿನ್ನೆಲೆ ಇಲ್ಲದ ತನ್ನನ್ನು ಪಕ್ಷ ಗುರುತಿಸಿದೆ’

ಉಡುಪಿ: ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದಿದ್ದರೂ ಭಾರತೀಯ ಜನತಾ ಪಕ್ಷ ನನ್ನನ್ನು ಗುರುತಿಸಿದೆ. ಎರಡು ಬಾರಿ ಶಾಸಕನಾಗುವ ಅವಕಾಶ ಕಲ್ಪಿಸಿದೆ ಎಂದು ಶಾಸಕ ಕೆ. ರಘುಪತಿ ಭಟ್ ಭಾವುಕರಾಗಿ ನುಡಿದರು.

ಅವರ ಜನ್ಮ ದಿನಾಚರಣೆ ಪ್ರಯುಕ್ತ ಬಿಜೆಪಿ ಉಡುಪಿ ನಗರ ಆಶ್ರಯದಲ್ಲಿ ನಗರ ಬಿಜೆಪಿಯ ಎಲ್ಲಾ ಮೋರ್ಚಾಗಳ ಸಹಭಾಗಿತ್ವದಲ್ಲಿ ಬುಧವಾರ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆ ರಕ್ತನಿಧಿಯಲ್ಲಿ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ನನ್ನ ಹುಟ್ಟುಹಬ್ಬದ ದಿನದಂದು ರಕ್ತದಾನ ಮಾಡಿದವರು ನನಗೆ ನೀಡಿದ ದೊಡ್ಡ ಗೌರವ ಎಂದು ಭಾವಿಸುತ್ತೇನೆ. ನನಗೆ ಇದಕ್ಕಿಂತ ದೊಡ್ಡ ಗೌರವ ಇನ್ನೊಂದಿರಲು ಅಸಾಧ್ಯ ಎಂದ ಅವರು, ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದವರನ್ನು ಅಭಿನಂದಿಸಿದರು.

ರಕ್ತದಾನ ಶಿಬಿರದಲ್ಲಿ ರಿಕ್ಷಾ ಚಾಲಕರು, ಪಕ್ಷ ಕಾರ್ಯಕರ್ತರು, ಶಾಸಕರ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ರಕ್ತದಾನ ಮಾಡಿದ್ದು, ಒಟ್ಟು 135 ಯೂನಿಟ್ ರಕ್ತ ಸಂಗ್ರಹವಾಯಿತು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ನಗರಸಭಾಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಸುವರ್ಧನ ನಾಯಕ್, ರಕ್ತನಿಧಿ ಮುಖ್ಯಸ್ಥೆ ಶಮಿ ಶಾಸ್ತ್ರಿ, ಕೆಂಸಿ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ, ಮಾರುಕಟ್ಟೆ ಪ್ರಬಂಧಕ ಮೋಹನ್ ಶೆಟ್ಟಿ, ಮಾಹೆ ಅಧಿಕಾರಿಗಳಾದ ಡಾ| ಪ್ರಭುದೇವ ಮಾನೆ, ಜೈವಿಠಲ್, ಜಿಲ್ಲಾ ಬಿಜೆಪಿ ಕೋಶಾಧಿಕಾರಿ ಪ್ರವೀಣ್ ಶೆಟ್ಟಿ, ಶ್ರೀಶ ನಾಯಕ್, ಅಂಡಾರು ದೇವಿಪ್ರಸಾದ್ ಶೆಟ್ಟಿ, ಸತೀಶ್ ಸಾಲಿಯಾನ್, ಗಿರೀಶ್ ಅಂಚನ್ ಮೊದಲಾದವರಿದ್ದರು.

ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಂಜುನಾಥ ಮಣಿಪಾಲ ನಿರೂಪಿಸಿದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!