ಉಡುಪಿ: ಜೀರ್ಣೋದ್ಧಾರಗೊಳ್ಳುತ್ತಿರುವ ಇಲ್ಲಿನ ಕುಂಜಿಬೆಟ್ಟು ಶ್ರೀ ಅನಂತಾಸನ ಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನದ ಶಿಲಾಮಯ ಗರ್ಭಗೃಹದ ದಧಾರ್ಮಿಕ ವಿಧಿ ವಿಧಾನಗಳು ವಾದಿರಾಜ ತಂತ್ರಿ ನೇತೃತ್ವದಲ್ಲಿ ನಡೆದಿದ್ದು, ಶುಕ್ರವಾರ ಶಿಲಾ ಹೊಸ್ತಿಲು ಸ್ಥಾಪನೆ ನಡೆಸಲಾಯಿತು.
ದೇವಳದ ಆಡಳಿತ ಮೊಕ್ತೇಸರ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಊರ ಹತ್ತು ಸಮಸ್ತರು, ಭಕ್ತರು ಹಾಗೂ ಜೀರ್ಣೋದ್ಧಾರ ಸಮಿತಿ ಸದಸ್ಯರ ಪಾಲ್ಗೊಳ್ಳುವಿಕೆಯಲ್ಲಿ ನಡೆಯಿತು.
ಸುಮಂಗಲೆಯರು ಹೊಸ್ತಿಲು ಪೂಜೆ ನಡೆಸಿದರು.
ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಪುತ್ತಿಗೆ ಶ್ರೀ ಸುಗುಣೇ0ದ್ರತೀರ್ಥ ಶ್ರೀಪಾದರು, ಮಠದ ದಿವಾನ ನಾಗರಾಜ ಆಚಾರ್ಯ, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷರಾದ ಮಲ್ಪೆ ವಿಶ್ವನಾಥ ಭಟ್ ಮತ್ತು ಎಸ್. ನಾರಾಯಣ ಮಡಿ, ಪ್ರಧಾನ ಕಾರ್ಯದರ್ಶಿ ಬಿ. ವಿಜಯರಾಘವ ರಾವ್, ಕಾರ್ಯದರ್ಶಿ ಶ್ರೀನಿವಾಸ ಆಚಾರ್ಯ, ಜೊತೆ ಕೋಶಾಧಿಕಾರಿ ಆರ್. ವಿಷ್ಣುಮೂರ್ತಿ ಉಪಾಧ್ಯಾಯ, ಸ0ತೋಷ್ ಪಿ. ಶೆಟ್ಟಿ ತೆ0ಕರಗುತ್ತು, ಜೀರ್ಣೋದ್ಧಾರ ಸಮಿತಿ ಸದಸ್ಯರು ಮತ್ತು ಮಹಿಳಾ ಭಜನಾ ಮ0ಡಳಿ ಸದಸ್ಯರು ಉಪಸ್ಥಿತರಿದ್ದರು