Saturday, July 2, 2022
Home ಸಮಾಚಾರ ರಾಜ್ಯ ವಾರ್ತೆ ತುಳು ರಾಜ್ಯ ಭಾಷೆಯಾಗಿಸಲು ಪರಿಶೀಲಿಸಿ ಕ್ರಮ

ತುಳು ರಾಜ್ಯ ಭಾಷೆಯಾಗಿಸಲು ಪರಿಶೀಲಿಸಿ ಕ್ರಮ

ಉಡುಪಿ: ತುಳು ರಾಜ್ಯ ಭಾಷೆಯಾಗಿಸುವಲ್ಲಿ ಸೂಕ್ತ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ಅಕಾಡೆಮಿಯ ಮನವಿಯನ್ನು ಪರಿಶೀಲಿಸಿ ಸೂಕ್ತ ನಿರ್ಧಾರ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲಸಾರ್ ಈಚೆಗೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿ, ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿಸುವ ಮನವಿ ಸಲ್ಲಿಸಿದರು.

ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ 3.6 ಕೋ.ರೂ. ಬಿಡುಗಡೆಯಾಗಿರುವ ಬಗ್ಗೆಯೂ ಪರಿಶೀಲಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

ಮುಖ್ಯಮಂತ್ರಿಗೆ ತುಳುನಾಡಿನ ಸಮಸ್ತ ಜನರ ಬೇಡಿಕೆಯನ್ನು ಮನದಟ್ಟು ಮಾಡಲಾಗಿದೆ. ಆಶಾದಾಯಕ ಪ್ರತಿಕ್ರಿಯೆ ಲಭಿಸಿದ್ದು, ನಮ್ಮ ಮನವಿಯನ್ನು ಸರಕಾರ ಪುರಸ್ಕರಿಸುವ ವಿಶ್ವಾಸ ಇದೆ. ಅಲ್ಲದೆ, ತುಳು ಭವನಕ್ಕೆ ಬಿಡುಗಡೆಯಾಗಿರುವ 3.6 ಕೋ.ರೂ.ಗೆ ಶೀಘ್ರ ಆಡಳಿತಾತ್ಮಕ ಅನುಮೋದನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ಕತ್ತಲಸಾರ್ ತಿಳಿಸಿದರು.

ಅಕಾಡೆಮಿ ಸದಸ್ಯೆ ಕಾಂತಿ ಶೆಟ್ಟಿ ಇದ್ದರು.

ನಿಮಗೆ ಈ ಸುದ್ದಿ ಇಷ್ಟವಾಯ್ತಾ?
ಹಾಗಾದರೆ ಇತರರಿಗೂ SHARE ಮಾಡಿ ಓದಿಸಿ...

ಕಾಮೆಂಟ್ ಮಾಡಿ

error: Content is protected !!