ಉಡುಪಿ: ಇಲ್ಲಿನ ಪೂರ್ಣಪ್ರಜ್ಞ ಕಾಲೇಜಿನ ಎನ್.ಎಸ್.ಎಸ್. ದ್ವಿತೀಯ ಬಿ.ಎಸ್ಸಿ ವಿದ್ಯಾರ್ಥಿ ರಂಜಿತ್ ಪಿ. ಜೆ. ಅವರು ಜ. 26ರಂದು ನವದೆಹಲಿ ರಾಜಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯಡಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.
ಈಗಾಗಲೇ ದಕ್ಷಿಣ ವಲಯದ ಆಯ್ಕೆ ಶಿಬಿರದಲ್ಲಿ ಪಾಲ್ಗೊಂಡು ಇದೀಗ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರು ಪಡುಬಿದ್ರಿಯ ಜಯಂತ ಪಿ. ಎಚ್. ಹಾಗೂ ಸ್ಮಿತಾ ದಂಪತಿ ಪುತ್ರ